ನೇತಾಜಿ ಕುಟುಂಬಿಕರಿಂದ ನಾಳೆ ಪ್ರಧಾನಿ ಭೇಟಿ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬ ಸದಸ್ಯರು ಪ್ರಧಾನಿ ನರೇಂದ್ರ...
ನೇತಾಜಿ ಸುಭಾಷ್ ಚಂದ್ರ ಬೋಸ್ (ಸಂಗ್ರಹ ಚಿತ್ರ)
ನೇತಾಜಿ ಸುಭಾಷ್ ಚಂದ್ರ ಬೋಸ್ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬ ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರನ್ನು ಬುಧವಾರ ಭೇಟಿ ಮಾಡಿ ನೇತಾಜಿಯವರಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುವ ಸಾಧ್ಯತೆಯಿದೆ.

ನೇತಾಜಿ ಕುಟುಂಬ ಭೇಟಿ ಮಾಡುವ ವಿಷಯವನ್ನು ಪ್ರಧಾನಿ ಸಚಿವಾಲಯ ಖಚಿತಪಡಿಸಿದೆ. ಪ್ರಧಾನಿಯವರು ತಮ್ಮ ಅಧಿಕೃತ ನಿವಾಸದಲ್ಲಿ ನೇತಾಜಿ ಕುಟುಂಬ 50 ಮಂದಿ ಸದಸ್ಯರನ್ನು ಭೇಟಿ ಮಾಡಲಿದ್ದಾರೆ.

ಕಳೆದ ತಿಂಗಳು ಪಶ್ಚಿಮ ಬಂಗಾಳ ಸರ್ಕಾರ ನೇತಾಜಿಯವರಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಅಲ್ಲಿಂದ ಕೇಂದ್ರ ಸರ್ಕಾರ ಕೂಡ ತನ್ನ ಬಳಿಯಿರುವ ದಾಖಲೆಗಳನ್ನು ಬಿಡುಗಡೆ ಮಾಡಬೇಕೆಂದು ಅನೇಕರಿಂದ ಒತ್ತಾಯ ಕೇಳಿಬರುತ್ತಲೇ ಇದೆ.
ನೇತಾಜಿಯವರು 70 ವರ್ಷಗಳ ಹಿಂದೆ ನಿಗೂಢವಾಗಿ ಕಣ್ಮರೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com