ದಾದ್ರಿ ಹತ್ಯೆ ಪ್ರಕರಣ: ಕೊನೆಗೂ ಮೌನ ಮುರಿದು ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ

ಉತ್ತರ ಪ್ರದೇಶದ ದಾದ್ರಿಯಲ್ಲಿ ಗೋಮಾಂಸ ಸಂಗ್ರಹಿಸಿಟಿದ್ದ ಸುಳ್ಳು ವದಂತಿಯಿಂದ ಮುಸ್ಲಿಂ ವ್ಯಕ್ತಿಯ ಹತ್ಯೆ ಪ್ರಕರಣ ನಡೆದಿರುವುದು ದುರದೃಷ್ಟಕರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ  (ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ನವದೆಹಲಿ : ದಾದ್ರಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ಸುಮ್ಮನಿದ್ದು, ಪ್ರತಿ ಪಕ್ಷಗಳಿಂದ ತೀವ್ರ ಟೀಕೆಗೊಳಗಾಗಿದ್ದ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮೌನ ಮುರಿದು, ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಉತ್ತರ ಪ್ರದೇಶದ ದಾದ್ರಿಯಲ್ಲಿ ಗೋಮಾಂಸ ಸಂಗ್ರಹಿಸಿಟಿದ್ದ ಸುಳ್ಳು ವದಂತಿಯಿಂದ ಮುಸ್ಲಿಂ ವ್ಯಕ್ತಿಯ ಹತ್ಯೆ ಪ್ರಕರಣ ನಡೆದಿರುವುದು ದುರದೃಷ್ಟಕರ ಎಂದು ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.  ಜೊತೆಗೆ ಪಾಕ್‌ ಗಾಯಕ ಗುಲಾಂ ಅಲಿ ಅವರ ಕಾರ್ಯಕ್ರಮ ರದ್ದಾಗಿರುವುದು ದುರದೃಷ್ಟಕರ. ಬಿಜೆಪಿ ಇಂತಹ ಕೃತ್ಯಗಳಿಗೆ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ದಾದ್ರಿ ಪ್ರಕರಣಕ್ಕೆ ಕೇಂದ್ರ ಸರ್ಕಾರವನ್ನು ಬೈಯ್ಯುವ ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದ ಮೋದಿ ದಾದ್ರಿಯಂತ ಘಟನೆಗಳು ಹಿಂದೆಯೂ ನಡೆದಿದ್ದವು ಎಂದಿದ್ದಾರೆ. ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಪಾತ್ರವೇನು ಎಂದು ಪ್ರಶ್ನಿಸಿರುವ ಅವರು  ಬಿಜೆಪಿ ಸುಳ್ಳು ಜಾತ್ಯಾತೀತವಾದವನ್ನು ವಿರೋಧಿಸುತ್ತದೆ ಎಂದಿದ್ದಾರೆ. ವಿರೋಧ ಪಕ್ಷಗಳು ರಾಜಕೀಯಕ್ಕಾಗಿ ಇಂತಹ ಘಟನೆಗಳನ್ನು ದುರುಪಯೋಗ ಪಡಿಸಿಕೊಂಡು ಲಾಭ ಮಾಡಿಕೊಳ್ಳಲು ಯತ್ನಿಸುತ್ತಿವೆ ಎಂದು ಮೋದಿ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com