ಮಹಾರಾಷ್ಟ್ರದಲ್ಲಿ ಡ್ಯಾನ್ಸ್ ಬಾರ್ ತೆರೆಯಲು ಸುಪ್ರಿಂ ಅನುಮತಿ

ಮಹಾರಾಷ್ಟ್ರದಲ್ಲಿ ಬಾರ್ ಮತ್ತು ಹೋಟೆಲ್, ಹಾಗೂ ರೆಸ್ಚೋರೆಂಟ್ ಗಳಲ್ಲಿ ಡ್ಯಾನ್ಸ್ ಮಾಡುವುದಕ್ಕೆ ಸುಪ್ರಿಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಹಾರಾಷ್ಟ್ರದಲ್ಲಿ ಬಾರ್ ಮತ್ತು ಹೋಟೆಲ್, ಹಾಗೂ ರೆಸ್ಚೋರೆಂಟ್ ಗಳಲ್ಲಿ ಡ್ಯಾನ್ಸ್ ಮಾಡುವುದಕ್ಕೆ ಸುಪ್ರಿಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಬಾರ್ ಗಳಲ್ಲಿ ಡ್ಯಾನ್ಸ್ ಮಾಡುವಾಗ ಅಸಭ್ಯ ನೃತ್ಯಗಳು ಕಂಡು ಬಂದರೆ ಅಂಥಹ ಬಾರ್ ಗಳ ಪರವಾನಗಿ ರದ್ದು ಮಾಡಬೇಕೆಂದು ಸ್ಥಳೀಯ ಆಡಳಿತಕ್ಕೆ ಅಧಿಕಾರ ನೀಡಿದೆ. ರಾಜ್ಯ ಸರ್ಕಾರ ಮಹಿಳಾ ನೃತ್ಯಗಾರ್ತಿಯರ ಘನತೆ ಕಾಪಾಡಿ ಅವರಿಗೆ ರಕ್ಷಣೆ ನೀಡಬೇಕು ಎಂದು ಸುಪ್ರಿಂ ಕೋರ್ಟ್ ತಿಳಿಸಿದೆ.

ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಡ್ಯಾನ್ಸ್ ಬಾರ್ ಗಳನ್ನು ನಿಷೇಧಿಸಿತ್ತು. ಈ ಬಗ್ಗೆ ಬಾರ್, ರೆಸ್ಟೋರೆಂಟ್ ಮಾಲೀಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಅಪೆಕ್ಸ್ ಕೋರ್ಟ್, ಈ ರೀತಿಯ ನಿಷೇಧ ಸಂವಿಧಾನ ಬಾಹಿರ ಎಂದು ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ದೀಪಕ್ ಮಿಶ್ರಾ ಮತ್ತು ಪ್ರಫುಲ್ಲಾ ಸಿ ಪಂತ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಡ್ಯಾನ್ಸ್ ಬಾರ್ ಮೇಲೆ ಹೇರಿದ್ದ ನಿಷೇಧಕ್ಕೆ ಸುಪ್ರೀಂಕೋರ್ಟ್ ತಡೆ ಕೊಟ್ಟ ಬೆನ್ನಲ್ಲೇ, ಈ ಕಾಯ್ದೆಯನ್ನು ಜಾರಿಗೊಳಿಸಿದ್ದು ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಂದು ಹಾಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯೆ ನೀಡಿದ್ದಾರೆ.  2014ರ ಜೂನ್ ನಲ್ಲಿ ಯಾವುದೇ ಚರ್ಚೆ ನಡೆಸದೇ ಅವಿರೋಧವಾಗಿ ಡ್ಯಾನ್ಸ್ ಬಾರ್ ನಿಷೇಧದ ಕಾಯ್ದೆಯನ್ನು ಪಾಸ್ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com