

ನವದೆಹಲಿ: ಬಿಹಾರದಲ್ಲಿ ಇಂದು ಎರಡನೇ ಹಂತದ ಚುನಾವಣೆಗೆ ಮತದಾನ ನಡೆಯಯುತ್ತಿದೆ. ಇದರ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿನೀಡಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಬಿಹಾರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಹೇಳುವ ಮೂಲಕ ನಿತೀಶ್ ಕುಮಾರ್ ಗೆ ಬಹಿರಂಗವಾಗಿ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ.
ನಿತೀಶ್ ಕುಮಾರ್ ಅಭೂತ ಪೂರ್ವ ಜಯ ಸಾಧಿಸಲಿದ್ದಾರೆ ಎಂದು ಹೇಳಿರುವ ಕೇಜ್ರಿವಾಲ್, ತಮಗೆ ಬಂದಿರುವ ಮಾಹಿತಿ ಪ್ರಕಾ ಬಿಹಾರದಲ್ಲಿ ಮೋದಿ ಸೋಲು ಅನುವುಭವಿಸುತ್ತಾರೆ ಎಂದು ಹೇಳಿದ್ದಾರೆ ಕೇಜ್ರಿವಾಲ್ ಬಿಹಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ.