ಪ್ರಧಾನಿ ಮೋದಿ ವಿವಾಹ, ಅರ್ಜಿ ವಜಾಗೊಳಿಸಿದ ಸುಪ್ರಿಂಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ವಿವಾಹದ ವಿಷಯವನ್ನು ರಹಸ್ಯವಾಗಿಟ್ಟಿದ್ದಕ್ಕೆ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ವಜಾಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಪತ್ನಿ ಜಶೋದಾ ಬೆನ್
ಪ್ರಧಾನಿ ನರೇಂದ್ರ ಮೋದಿ ಮತ್ತು ಪತ್ನಿ ಜಶೋದಾ ಬೆನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿವಾಹದ ವಿಷಯವನ್ನು ರಹಸ್ಯವಾಗಿಟ್ಟಿದ್ದಕ್ಕೆ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಅಹ್ಮದಾಬಾದ್ ನಿವಾಸಿ ನಿಶಾಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ವಜಾಗೊಳಿಸಿದೆ.

ಗುಜರಾತ್ ಹೈ ಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿ ವಜಾಗೊಂಡ ನಂತರ,  ನಿಶಾಂತ್ ಶರ್ಮಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ನ್ಯಾ.ಜೆ.ಚೆಲಮೇಶ್ವರ್ ಅವರ ನೇತೃತ್ವದ ಪೀಠವೂ ವಿಚಾರಣೆ ನಡೆಸಲು ನಿರಾಕರಿಸಿದೆ.

ನರೇಂದ್ರ ಮೋದಿ ವಿವಾಹದ ವಿಷಯವನ್ನು ಬಚ್ಚಿಟ್ಟಿದ್ದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅರ್ಜಿಯೂ ಸಲ್ಲಿಕೆಯಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ಶುಕ್ರವಾರ ತಳ್ಳಿ ಹಾಕಿದೆ.

2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುವಾಗ ಅಫಿಡವಿಟ್‌ನಲ್ಲಿ, ಮೋದಿ ತಮ್ಮ ಪತ್ನಿ ಹೆಸರನ್ನು ನಮೂದಿಸಿದ ಕಾರಣ ದುರು ದಾಖಲಾಗಿತ್ತು.



ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com