ಪ್ರತಿವರ್ಷ ರಸ್ತೆ ಅಪಘಾತದಲ್ಲಿ ಒಂದು ಲಕ್ಷ ಜನರ ಸಾವು: ಕೇಂದ್ರ ಸಚಿವ ನಿತಿನ್ ಗಡ್ಕರಿ

ಪ್ರತಿ ವರ್ಷ ಭಾರತದಲ್ಲಿ ರಸ್ತೆ ಅಪಘಾತದಿಂದ ಒಂದು ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ರಸ್ತೆ ಅಪಘಾತ(ಸಂಗ್ರಹ ಚಿತ್ರ)
ರಸ್ತೆ ಅಪಘಾತ(ಸಂಗ್ರಹ ಚಿತ್ರ)

ಪಣಜಿ: ಪ್ರತಿ ವರ್ಷ ಭಾರತದಲ್ಲಿ ರಸ್ತೆ ಅಪಘಾತದಿಂದ ಒಂದು ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 
ವಾರ್ಷಿಕ 5 ಲಕ್ಷ ರಸ್ತೆ ಅಪಘಾತ ಸಂಭವಿಸುತ್ತಿದ್ದು 1 .5 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಹೆಚ್ಚುತ್ತಿರುವ ಅಪಘಾತಗಳ ಬಗ್ಗೆ ರಸ್ತೆ ಸಾರಿಗೆ ಇಲಾಖೆ ಆತಂಕಗೊಂಡಿದ್ದು ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಿದೆ ಎಂದು ಗಡ್ಕರಿ ತಿಳಿಸಿದ್ದಾರೆ. 
ಪಣಜಿಯಲ್ಲಿ ನಡೆಯುತ್ತಿರುವ ಗ್ಲೋಬಲ್ ಬ್ಯುಸಿನೆಸ್ ಫೋರ್ಮ್ ನಲ್ಲಿ ಭಾಗವಹಿಸಿ ಮಾತನಾಡಿದ ಗಡ್ಕರಿ, ರಸ್ತೆ ಸಾರಿಗೆ ಇಲಾಖೆ ವೇಗವಾಗಿ ಕಾರ್ಯನಿರ್ವಹಿಸುತ್ತಿದ್ದು  ಶೇ.95  ರಷ್ಟು  ಯೋಜನೆಗಳು ಪ್ರಗತಿಯಲ್ಲಿವೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ 283 ಯೋಜನೆಗಳು ವಿವಿಧ ಕಾರಣಗಳಿಂದಾಗಿ ಸ್ಥಗಿತಗೊಂಡಿತ್ತು. ಆದರೆ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯೋಜನೆಗಳು ತ್ವರಿತಗತಿಯಲ್ಲಿ ಸಾಗುತ್ತಿವೆ ಎಂದು ಗಡ್ಕರಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com