ದಲಿತರ ಮನೆಗೆ ಬೆಂಕಿ: ಒಂದೇ ಕುಟುಂಬದ ನಾಲ್ವರು ಸಜೀವ ದಹನ

ದಲಿತ ಕುಟುಂಬ ವಾಸವಿದ್ದ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಭೀಕರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಫರಿದಾಬಾದ್: ದಲಿತ ಕುಟುಂಬ ವಾಸವಿದ್ದ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಭೀಕರ ಘಟನೆ ಸೋಮವಾರ ತಡರಾತ್ರಿ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ.

ಫರಿದಾಬಾದ್ ಜಿಲ್ಲೆಯ ಮಲ್ಲಾಭಾಗ್ ಗ್ರಾಮದಲ್ಲಿ ನಿನ್ನೆ ರಾತ್ರಿ ಮಲಗಿದ್ದ ವೇಳೆ ಕಿಡಿಗೇಡಿಗಳು ದಲಿತರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಜೀವ ದಹನವಾಗಿದ್ದಾರೆ.

ದುಷ್ಕರ್ಮಿಗಳು ಪೆಟ್ರೋಲ್ ಹಾಕಿ ಮನೆಗೆ ಬೆಂಕಿ ಹಚ್ಚಿದ್ದು, ಘಟನೆ ಅಂತರ ಜಾತಿ ಕಲಹ ಇರುಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com