ಇಸ್ಲಾಮಿಕ್ ಸ್ಟೇಟ್ ವಿರುದ್ಧ ಹೋರಾಡಲು ಒಗ್ಗೂಡಿದ 40 ಕ್ಕೂ ಹೆಚ್ಚು ಹಿಂದೂ ಸಂಘಟನೆಗಳು!

ಇಸ್ಲಾಮಿಕ್ ಸ್ಟೇಟ್ ವಿರುದ್ಧ ಹೋರಾಡಲು 40 ಹಿಂದೂ ಸಂಘಟನೆಗಳು ಒಗ್ಗೂಡಿದ್ದು ಇಸ್ಲಾಮಿಕ್ ಸ್ಟೇಟ್ ವಿರೋಧಿ ಭಾರತ ಎಂಬ ಅಭಿಯಾನ ಪ್ರಾರಂಭಿಸಿವೆ.
ಇಸ್ಲಾಮಿಕ್ ಸ್ಟೇಟ್ ವಿರುದ್ಧ ಹೋರಾಡಲು ಒಗ್ಗೂಡಿದ 40 ಕ್ಕೂ ಹೆಚ್ಚು ಹಿಂದೂ ಸಂಘಟನೆಗಳು
ಇಸ್ಲಾಮಿಕ್ ಸ್ಟೇಟ್ ವಿರುದ್ಧ ಹೋರಾಡಲು ಒಗ್ಗೂಡಿದ 40 ಕ್ಕೂ ಹೆಚ್ಚು ಹಿಂದೂ ಸಂಘಟನೆಗಳು

ಕೊಯಂಬತ್ತೂರು: ಇಸ್ಲಾಮಿಕ್ ಸ್ಟೇಟ್ ವಿರುದ್ಧ ಹೋರಾಡಲು 40  ಹಿಂದೂ ಸಂಘಟನೆಗಳು ಒಗ್ಗೂಡಿದ್ದು ಇಸ್ಲಾಮಿಕ್ ಸ್ಟೇಟ್ ವಿರೋಧಿ ಭಾರತ ಎಂಬ ಅಭಿಯಾನ ಪ್ರಾರಂಭಿಸಿವೆ.
ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ್ ಶಿಂಧೆ ಅಭಿಯಾನಕ್ಕೆ ಸಂಬಂಧಿಸಿದ ವೆಬ್ ಸೈಟ್ ನ್ನು ಪ್ರಾರಂಭಿಸಿದ್ದಾರೆ. ಅಭಿಯಾನದಲ್ಲಿ ಭಾಗವಾಗಿರುವ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಮಾತನಾಡಿ, ಭಯೋತ್ಪಾದನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ಅಭಿಯಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಈ ಅಭಿಯಾನ ಮುಸ್ಲಿಮರ ವಿರುದ್ಧವಾಗಿ ಅಲ್ಲ ಬದಲಾಗಿ ಭಯೋತ್ಪಾದನೆ ನಡೆಸುತ್ತಿರುವ ಉಗ್ರ ಸಂಘಟನೆಗಳ ವಿರುದ್ಧ ಎಂದು ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ. ಇಸ್ಲಾಮಿಕ್ ಸಂಘಟನೆಯೊಂದಿಗೆ ಸೇರುವುದಕ್ಕೆ ಮುಸ್ಲಿಂ ಯುವಕರಿಗೆ ಬ್ರೈನ್ ವಾಶ್ ಮಾಡಲಾಗುತ್ತಿದೆ. ಇಂಥ ಯುವಕರು ಉಗ್ರರಿಗೆ ಬಲಿಪಶುಗಳಾಗುತ್ತಿದ್ದಾರೆ. ಇಸ್ಲಾಮಿಕ್ ಸ್ಟೇಟ್ ವಿರುದ್ಧದ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಲು ಮುಸ್ಲಿಮರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ಮುತಾಲಿಕ್ ಹೇಳಿದ್ದಾರೆ. ದೇಶಭಕ್ತಿ ಹೊಂದಿರುವ ಯುವಕರು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮುತಾಲಿಕ್ ಕರೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com