ನೇತಾಜಿ ಕುರಿತ ದಾಖಲೆಗಳ ಬಹಿರಂಗ: ಭಾರತದ ಮನವಿಯನ್ನು ಪರಿಶೀಲಿಸಲಿರುವ ರಷ್ಯಾ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಬೇಕೆಂಬ ಭಾರತದ...
ನೇತಾಜಿ ಸುಭಾಷ್ ಚಂದ್ರ ಬೋಸ್(ಸಂಗ್ರಹ ಚಿತ್ರ)
ನೇತಾಜಿ ಸುಭಾಷ್ ಚಂದ್ರ ಬೋಸ್(ಸಂಗ್ರಹ ಚಿತ್ರ)

ನವದೆಹಲಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಬೇಕೆಂಬ ಭಾರತದ ಮನವಿ ಬಗ್ಗೆ ಪರಿಶೀಲನೆ ನಡೆಸುವುದಾಗಿ ರಷ್ಯಾದ ವಿದೇಶಾಂಗ ಸಚಿವ ಸರ್ಜಿ ಲವ್ರೊವ್ ಭರವಸೆ ನೀಡಿದ್ದಾರೆ.

ರಷ್ಯಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ನೇತಾಜಿ ದಾಖಲೆಗಳನ್ನು ಬಿಡುಗಡೆ ಮಾಡಲು ರಷ್ಯಾ ಸಹಕಾರ ನೀಡಬೇಕೆಂದು ಲವ್ರೊವ್ ಅವರ ಬಳಿ ವಿನಂತಿಸಿಕೊಂಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅವರು, ರಷ್ಯಾ ಬಳಿ ಯಾವುದಾದರೂ ಮಾಹಿತಿ ಇದೆಯೇ ಎಂಬ ಬಗ್ಗೆ ನೋಡುವುದಾಗಿ ತಿಳಿಸಿರುವುದಾಗಿ ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.

ಮೊನ್ನೆ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು, ನೇತಾಜಿ ಕುಟುಂಬದ 35 ಮಂದಿ ಸದಸ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮುಂದಿನ ವರ್ಷ ಜನವರಿ 23ರಿಂದ ನೇತಾಜಿ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಆ ಸಂದರ್ಭದಲ್ಲಿ ಘೋಷಿಸಿದ್ದರು. ನೇತಾಜಿಯವರು ಉಳಿದುಕೊಂಡಿದ್ದ ಹೊರ ದೇಶಗಳಲ್ಲಿ ಅವರಲ್ಲಿ ಲಭ್ಯವಿರುವ ಮಾಹಿತಿಗಳನ್ನು ಬಹಿರಂಗಪಡಿಸುವಂತೆ ಮನವಿ ಮಾಡಿಕೊಳ್ಳುವುದಾಗಿ ಅದೇ ಸಂದರ್ಭದಲ್ಲಿ ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com