

ಶೋಪಿಯಾನ್: ವಿಜಯದಶಮಿಯಂದ ಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಜಮ್ಮು ಕಾಶ್ಮೀರದ ಶೋಪಿಯಾನ್ ನ ಬಳಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಉಗ್ರರು ಮೃತಪಟ್ಟಿದ್ದಾರೆ. ಉಗ್ರರು ಹಾಗೂ ಸೇನೆಯ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ.