ದಲಿತರ ಜೀವಂತ ದಹನ: ಮತ್ತೆ 3 ಆರೋಪಿಯನ್ನು ಬಂಧಿಸಿದ ಪೊಲೀಸರು

ದಲಿತರ ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನು ಮೂರು ಮಂದಿಯನ್ನು ಬಂಧಿಸಿದ್ದು, ಇಲ್ಲಿಯವರೆಗೂ ಒಟ್ಟು ಏಳು ಆರೋಪಿಗಳನ್ನು...
ಗ್ರಾಮಸ್ಥರು
ಗ್ರಾಮಸ್ಥರು

ಫರೀದಾಬಾದ್: ದಲಿತರ ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನು ಮೂರು ಮಂದಿಯನ್ನು ಬಂಧಿಸಿದ್ದು, ಇಲ್ಲಿಯವರೆಗೂ ಒಟ್ಟು ಏಳು ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 11 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ಪೈಕಿ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಇನ್ನು ನಾಲ್ಕು ಆರೋಪಿಗಳು ತಲೆ ಮರೆಸಿಕೊಂಡು ಅವರಿಗಾಗಿ ಶೋಧಕಾರ್ಯ ನಡೆಯುತ್ತಿದ್ದು, ಅರವನ್ನು ಬಂಧಿಸುವ ವಿಶ್ವಾಸವಿದೆ ಎಂದು ಪೊಲೀಸ್ ಆಯುಕ್ತ ಸುಭಾಶ್ ಯಾದವ್ ತಿಳಿಸಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಅವರು ನಿನ್ನೆ ದಲಿತ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.

ದಲಿತ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ಗುಡಿಸಲಿನಲ್ಲಿ ಮಲಗಿದ್ದ ಸಮಯದಲ್ಲಿ ಮೇಲು ಜಾತಿಗೆ ಒಳಪಟ್ಟ ಗುಂಪೊಂದು ಗುಡಿಸಲಿಗೆ ಬೆಂಕಿ ಹಚ್ಚಿದ್ದರು. ಈ ವೇಳೆ ಮಕ್ಕಳಿಬ್ಬರು ಮೃತಪಟ್ಟಿದ್ದು, ಗಾಯಗೊಂಡ ಪೋಷಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜೀತೇಂದ್ರ ಎಂಬುವವರ ಗುಡಿಸಲಿಗೆ ಬೆಂಕಿ ಹಚ್ಚಿಲಾಗಿತ್ತು. ಜೀತೇಂದ್ರ ಪತ್ನಿಗೆ ಶೇ.70ರಷ್ಟು ಸುಟ್ಟು ಹೋಗಿದ್ದು, ದೆಹಲಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೂವರೆ ವರ್ಷದ ಪುತ್ರ ವೈಭವ್ ಹಾಗೂ 11 ತಿಂಗಳ ಪುತ್ರಿ ದಿವ್ಯ ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com