ವಾಣಿಜ್ಯ ವಿವಾದಗಳಿಗೆ ಪ್ರತ್ಯೇಕ ನ್ಯಾಯಾಲಯ

ವಾಣಿಜ್ಯ ವಿವಾದಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಮತ್ತು ಉದ್ಯಮ ಸ್ನೇಹಿ ವಾತಾವರಣ ರೂಪಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಎರಡು ಸುಗ್ರೀವಾಜ್ಞೆಗಳಿಗೆ ಅನುಮೋದನೆ ನೀಡಿದೆ.
ಕೇಂದ್ರ ಸಚಿವ ಸಂಪುಟ ಸಭೆ(ಸಂಗ್ರಹ ಚಿತ್ರ)
ಕೇಂದ್ರ ಸಚಿವ ಸಂಪುಟ ಸಭೆ(ಸಂಗ್ರಹ ಚಿತ್ರ)
Updated on

ನವದೆಹಲಿ: ವಾಣಿಜ್ಯ ವಿವಾದಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಮತ್ತು ಉದ್ಯಮ ಸ್ನೇಹಿ ವಾತಾವರಣ ರೂಪಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಎರಡು ಸುಗ್ರೀವಾಜ್ಞೆಗಳಿಗೆ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಮಧ್ಯಸ್ಥಿಕೆ ಮತ್ತು ಸಂಧಾನ ಕಾಯ್ದೆಗೆ ತಿದ್ದುಪಡಿ ತಂದು ವಾಣಿಜ್ಯ ನ್ಯಾಯಾಲಯಗಳು ವಾಣಿಜ್ಯ ವಿಭಾಗ ಮತ್ತು ವಾಣಿಜ್ಯ ನ್ಯಾಯಾಧಿಕಾರಣ ವಿಭಾಗೀಯ ಹೈಕೋರ್ಟ್ಸ್ ಮಸೂದೆ-2015 ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಸಮ್ಮತಿ ನೀಡಿತು ಎಂದು ಮೂಲಗಳು ಹೇಳಿವೆ. ಈ ಮಸೂದೆ ಸಂಸದೀಯ ಸ್ಥಾಯಿ ಸಮಿತಿ ಮುಂದಿವೆ. ಕೇಂದ್ರ ಸಚಿವ ಸಂಪುಟ ಕಳೆದ ಡಿಸೆಂಬರ್ ನಲ್ಲಿ ಮಧ್ಯಸ್ಥಿಕೆ ಕಾಯ್ದೆಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿತ್ತು. ಆದರೆ ರಾಷ್ಟ್ರಪತಿಗಳ ಅನುಮೋದನೆಗೆ ಕಲಿಸಲಿಲ್ಲ. ನಂತರ ಕಳೆದ ಆಗಸ್ಟ್ ನಲ್ಲಿ ಕೇಂದ್ರ ಸಚಿವ ಸಂಪುಟ ವಾಣಿಜ್ಯ ವಿವಾದಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು  ಅನುವಾಗುವಂತೆ ಮಧ್ಯಸ್ಥಿಗೆ ಕಾಯ್ದೆಗೆ ಅನುಮೋದನೆ ನೀಡಿತು. ಆದರೆ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com