ಮಾತಾಡುವ ಮುಂಚೆ ಯೋಚಿಸಿ: ಸಚಿವರಿಗೆ ರಾಜನಾಥ್ ಸಿಂಗ್ ಬುದ್ಧಿ ಮಾತು

ಕೇಂದ್ರ ಸಚಿವರುಗಳಾದ ವಿ.ಕೆ.ಸಿಂಗ್ ಮತ್ತು ಕಿರಣ್ ರಿಜಿಜು ಅವರ ವಿವಾದಾತ್ಮಕ ಹೇಳಿಕೆಗೆ ಎಲ್ಲೆಡೆ ವ್ಯಾಪಕ ಟೀಕೆ ಮತ್ತು ವಿರೋಧ...
ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್
ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್
Updated on: 

ನವದೆಹಲಿ: ಕೇಂದ್ರ ಸಚಿವರುಗಳಾದ ವಿ.ಕೆ.ಸಿಂಗ್ ಮತ್ತು ಕಿರಣ್ ರಿಜಿಜು ಅವರ ವಿವಾದಾತ್ಮಕ ಹೇಳಿಕೆಗೆ ಎಲ್ಲೆಡೆ ವ್ಯಾಪಕ ಟೀಕೆ ಮತ್ತು ವಿರೋಧ ಕೇಳಿಬರುತ್ತಿರುವ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ರಾಜನಾಥ್ ಸಿಂಗ್, ಸಾರ್ವಜನಿಕ ಹೇಳಿಕೆ ನೀಡುವಾಗ ಹೆಚ್ಚಿನ ಜಾಗರೂಕತೆಯಿಂದ ಇರಬೇಕು ಎಂದು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಬುದ್ದಿ ಮಾತು ಹೇಳಿದ್ದಾರೆ.

ವಿ.ಕೆ.ಸಿಂಗ್ ಮತ್ತು ರಿಜಿಜು ಇಬ್ಬರೂ ತಾವು ನೀಡಿರುವ ಹೇಳಿಕೆಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಆದರೆ ನಾವೆಲ್ಲರೂ ಆಡಳಿತ ಪಕ್ಷದ ಕಾರ್ಯಕರ್ತರು, ಜನರ ಬಗ್ಗೆ ನಮಗೆ ಕೆಲವು ಜವಾಬ್ದಾರಿಗಳಿವೆ. ಆದುದರಿಂದ ನಾವು ಏನೇ ಮಾತನಾಡುವ ಮೊದಲೂ ಯೋಚಿಸಿ ಮಾತನಾಡಬೇಕು ಎಂದು ಹೇಳಿದ್ದಾರೆ.

ಆಡಳಿತಾರೂಢ ಪಕ್ಷಗಳ ಸದಸ್ಯರು ಏನೋ ಮಾತನಾಡುವುದು, ನಂತರ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳುವುದನ್ನು ಮಾಡಬಾರದು. ತಾವು ಮಾತನಾಡುವ ಬಗ್ಗೆ ಅವರಿಗೆ ಸ್ಪಷ್ಟ ತಿಳುವಳಿಕೆ ಇರಬೇಕು. ನಾವು ಜನರ ಪ್ರತಿನಿಧಿಗಳು. ಜನರು ನಮ್ಮಿಂದ ತುಂಬಾ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ನಾವು ನೀಡುವ ಪ್ರತಿಯೊಂದು ಹೇಳಿಕೆಗಳೂ ಮುಖ್ಯವಾಗಿರುತ್ತವೆ. ಹಾಗಾಗಿ ಮಾತನಾಡುವ ಮುಂಚೆ ಯೋಚಿಸಿ ಮಾತನಾಡಬೇಕು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಹರ್ಯಾಣದಲ್ಲಿ ಇಬ್ಬರು ದಲಿತ ಮಕ್ಕಳ ಸಜೀವ ದಹನ ಪ್ರಕರಣದ ಬಗ್ಗೆ ನಿನ್ನೆ ಮಾತಾಡಿದ್ದ ಕೇಂದ್ರ ಸಚಿವ ವಿ.ಕೆ.ಸಿಂಗ್, ಪ್ರತಿಯೊಂದು ಘಟನೆಗೂ ಕೇಂದ್ರ ಸರ್ಕಾರವನ್ನು ಹೊಣೆ ಮಾಡಲು ಸಾಧ್ಯವಿಲ್ಲ. ಯಾರಾದರೂ ನಾಯಿಗೆ ಕಲ್ಲೆಸೆದರೆ ಅದಕ್ಕೂ ಕೇಂದ್ರ ಸರ್ಕಾರ ಹೊಣೆ ಅಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com