ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: 1 ಸಾವು, 4 ಗಾಯ

ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಜಮ್ಮುವಿನ ಸಾಂಬಾ ಸೆಕ್ಟರ್ ನ 9 ಭಾರತೀಯ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೈನಿಕರು ಕಳೆದ ರಾತ್ರಿಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದಾರೆಂದು ಶನಿವಾರ ತಿಳಿದುಬಂದಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ಜಮ್ಮು: ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಜಮ್ಮುವಿನ ಸಾಂಬಾ ಸೆಕ್ಟರ್ ನ 9 ಭಾರತೀಯ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೈನಿಕರು ಕಳೆದ ರಾತ್ರಿಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಓರ್ವ ನಾಗರೀಕ ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಪಡೆಗಳು ದಿಟ್ಟ ಉತ್ತರ ನೀಡುತ್ತಿದ್ದು, ಪ್ರಸ್ತುತ ಸಾಂಬಾ ಸೆಕ್ಟರ್ ನ ಬಸಂತರ್ ಮತ್ತು ತರ್ನಾ ನದಿಯ ಬಳಿ ಗುಂಡಿನ ಕಾಳಗ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಕಳೆದೆರಡು ದಿನಗಳಿಂದಲೂ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ನಿನ್ನೆ ನಡೆಸಿದ ಗುಂಡಿನ ದಾಳಿಗೆ ಸಾಂಬಾ ಸೆಕ್ಟರ್ ಪ್ರದೇಶದಲ್ಲಿ ಓರ್ವ ನಾಗರೀಕ ಸಾವನ್ನಪ್ಪಿದ್ದನ್ನಲ್ಲದೇ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದರು.

ಕದನ ವಿರಾಮ ಉಲ್ಲಂಘನೆ ಕುರಿತಂತೆ ನಿನ್ನಯಷ್ಟೇ ಹೇಳಿಕೆ ನೀಡಿದ್ದ ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು, ಭಾರತೀಯ ಪಡೆಗಳ ಶಸ್ತ್ರಾಸ್ತ್ರಗಳು ದುರಸ್ಥಿಯಲ್ಲಿದ್ದ ಸಂದರ್ಭದಲ್ಲಿ ಪಾಕಿಸ್ತಾನದ ಪಡೆಗಳು ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿ ವೇಳೆ ಓರ್ವ ನಾಗರೀಕ ಸಾವನ್ನಪ್ಪಿದ್ದಾನೆ. ಪಾಕಿಸ್ತಾನ ಮತ್ತೆ ತನ್ನ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವ ಕೆಲಸಗಳನ್ನು ಮಾಡುತ್ತಿದೆ. ಹೀಗಾಗಿಯೇ ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುವುದನ್ನು ಕಳೆದುಕೊಂಡಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com