ಭೂಕುಸಿತ:ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿ ಸ್ಥಗಿತ

ಜಮ್ಮು ಪ್ರದೇಶದ ರಂಬಾನ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ನಂ.1 ಸ್ಥಗಿತಗೊಂಡಿದೆ.
ಜಮ್ಮು
ಜಮ್ಮು

ಜಮ್ಮು: ಜಮ್ಮು ಪ್ರದೇಶದ ರಂಬಾನ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಂಡಿದೆ.
ಭಾನುವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ವಹಿಸುವ ಗಡಿ ರಸ್ತೆ ಸಂಸ್ಥೆ(ಬಿ.ಆರ್.ಒ) ಭೂಕುಸಿತವನ್ನು ತೆರವುಗೊಳಿಸುತ್ತಿದೆ ಎಂದು ಸಂಚಾರ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಮ್ಮು- ಶ್ರೀನಗರ ಹೆದ್ದಾರಿಯಲ್ಲಿ ಸಂಚರಿಸುವವರು ಮೊದಲು ಸಂಚಾರ ನಿಯಂತ್ರಣಕ್ಕೆ ಸಂಬಂಧಿಸಿದ ಕಚೇರಿಗಳನ್ನು ಸಂಪರ್ಕಿಸಿ ಪರಿಸ್ಥಿತಿಯ ಬಗ್ಗೆ ತಿಳಿದು ನಂತರ ಸಂಚರಿಸುವುದು ಒಳಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಹಿಮಪಾತದಿಂದ ಶ್ರೀನಗರ- ಲೇಹ್ ರಾಷ್ಟ್ರೀಯ ಹೆದ್ದಾರಿಯ ಜೋಜಿಲ್ಲ ಪಾಸ್ ಸ್ಥಗಿತಂಡಿತ್ತು. ಸ್ಥಗಿತಗೊಂಡಿರುವ ಹೆದ್ದಾರಿ ಕಾಶ್ಮೀರ ಕಣಿವೆಗೆ ಲಡಾಕ್ ನೊಂದಿಗೆ ಸಂಪರ್ಕ ಕಲ್ಪಿಸುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com