ಮಮತಾ ನಂತರ ನಿತೀಶ್ ಬೆಂಬಲಕ್ಕೆ ನಿಂತ ಕೇಜ್ರಿವಾಲ್

ದೇಶದೆಲ್ಲೆಡೆ ಸಾಕಷ್ಟು ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಮೂರನೇ ಹಂತರ ಚುನಾವಣೆ ಬುಧವಾರ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇದೀಗ ಬಿಹಾರದ ಮಹಾಮೈತ್ರಿ ಕೂಟಕ್ಕೆ ದೆಹಲಿ ಮುಖ್ಯಮಂತ್ರಿ...
Updated on: 

ನವದೆಹಲಿ: ದೇಶದೆಲ್ಲೆಡೆ ಸಾಕಷ್ಟು ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಮೂರನೇ ಹಂತರ ಚುನಾವಣೆ ಬುಧವಾರ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇದೀಗ ಬಿಹಾರದ ಮಹಾಮೈತ್ರಿ ಕೂಟಕ್ಕೆ ದೆಹಲಿ ಮುಖ್ಯಮಂತ್ರಿ ಬೆಂಬಲ ಸೂಚಿಸಿದ್ದು, ನಿತೀಸ್ ಕುಮಾರ್ ಗೆ ಮತ ಹಾಕುವಂತೆ ಬಿಹಾರ ಜನತೆಗೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ಈ ಕುರಿತಂತೆ ಟ್ಟಿಟ್ಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಬಿಹಾರ ಸಹೋದರ-ಸಹೋದರಿಯರಲ್ಲಿ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ. ಮತ್ತೆ ನಿತೀಶ್ ಕುಮಾರ್ ಅವರಿಗೆ ಮತ ನೀಡಿ ಅಧಿಕಾರಕ್ಕೆ ಬರುವಂತೆ ಮಾಡಿ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಅವರ ಬೆಂಬಲಕ್ಕೆ ಈಗಾಗಲೇ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್ ಅವರು ತಮ್ಮ ಬೆಂಬಲಕ್ಕೆ ಧನ್ಯವಾದ ಅರವಿಂದ್ ಜೀ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಒಟ್ಟು 5 ಹಂತದ ಚುನಾವಣೆ ನಡೆಯುತ್ತಿದ್ದು, ಈಗಾಗಲೇ 2ನೇ ಹಂತದ ಚುನಾವಣೆ ಮುಕ್ತಾಯವಾಗಲಿದೆ. ನಾಳೆ ಮೂರನೇ ಹಂತದ ಚುನಾವಣೆ ಆರಂಭವಾಗಲಿದೆ. ಈ ಹಿಂದೆಯಷ್ಟೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಹ ನಿತೀಶ್ ಕುಮಾರ್ ಅವರಿಗೆ ಬೆಂಬಲ ಸೂಚಿಸಿದ್ದರು. ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಹ ನಿತೀಶ್ ಅವರಿಗೆ ಬೆಂಬಲ ಸೂಚಿಸಿರುವುದು ಬಿಜೆಪಿ ವಿರುದ್ಧ ಎಲ್ಲಾ ನಾಯಕರು ತಿರುಗಿಬಿದ್ದು ತಂತ್ರ ಹಾಗೂ ಷಡ್ಯಂತ್ರ ರೂಪಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ದೇಶದಾದ್ಯಂತ ಬಿಹಾರ ಚುನಾವಣೆ ಸಾಕಷ್ಟು ಕುತೂಹಲವನ್ನು ಕೆರಳಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com