

ಚೆನ್ನೈ: ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಗುರುವಾರ ನಡೆದಿದೆ.
ಮೃತ ಪೇದೆಯನ್ನು ಪೊಲಾಕ್ ರಾಜ್ಬೋಂಗ್ಶಿ (26) ಎಂದು ಗುರ್ತಿಸಲಾಗಿದ್ದು, ಇಂದು ಮಧ್ಯಾಹ್ನ ಶೌಚಾಯಲಕ್ಕೆ ಹೋಗಿದ್ದ ವೇಳೆ ಇದ್ದಕ್ಕಿದ್ದಂತೆ ತಮ್ಮ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ತನಿಖೆ ಆರಂಭಿಸಿದ್ದು, ಆತ್ಮಹತ್ಯೆಗೆ ಪ್ರಮುಖ ಕಾರಣ ಈ ವರೆಗೂ ತಿಳಿದುಬಂದಿಲ್ಲ.