ದಲಿತ ಮಕ್ಕಳ ಸಜೀವ ದಹನ: 11 ಜನರ ವಿರುದ್ಧ ಪ್ರಕರಣ ದಾಖಲು

ದಲಿತ ಮಕ್ಕಳ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಗುರುವಾರ 11 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ವರದಿಗಳು ತಿಳಿಸಿವೆ...
ಸಿಬಿಐ (ಸಂಗ್ರಹ ಚಿತ್ರ)
ಸಿಬಿಐ (ಸಂಗ್ರಹ ಚಿತ್ರ)
Updated on: 

ನವದೆಹಲಿ: ದಲಿತ ಮಕ್ಕಳ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಗುರುವಾರ 11 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ವರದಿಗಳು ತಿಳಿಸಿವೆ.

ದಲಿತ ಕುಟುಂಬವೊಂದರ ಮನೆಗೆ ಮೇಲ್ಜಾತಿಯ ಕೆಲವು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆ ವೇಳೆ ಎರಡೂವರೆ ವರ್ಷದ ವೈಭವ್ ಮತ್ತು 11 ತಿಂಗಳ ಮದು ದಿವ್ಯಾ ಸಜೀವವಾಗಿ ಸುಟ್ಟುಕರಕಲಾಗಿ ಮೃತಪಟ್ಟಿದ್ದರು. ಮಗುವಿನ ತಾಯಿಗೂ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ವೇಳೆ ಮಗುವಿನ ತಂದೆ ಕೂಡ ಗಾಯಗೊಂಡಿದ್ದರು.

ಈ ಪ್ರಕರಣ ರಾಜಕೀಯ ವಲಯದಲ್ಲಿ ಸಾಕಷ್ಟು ವಿವಾದಗಳನ್ನೇ ಸೃಷ್ಟಿ ಮಾಡಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಹರಿಯಾಣ ಸರ್ಕಾರವು ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿತ್ತು.

ಸರ್ಕಾರದ ಆದೇಶದಂತೆ ತನಿಖೆ ಆರಂಭಿಸಿದ ಸಿಬಿಐ ಅಧಿಕಾರಿಗಳು ಇಂದು ಸ್ಥಳ ಪರಿಶೀಲನೆ ನಡೆಸಿದ್ದು, ಘಟನಾ ಸ್ಥಳದಲ್ಲಿ ದೊರೆತ ಸಾಕ್ಷಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದೆ. ಅಲ್ಲದೆ, ಪ್ರಕರಣ ಸಂಬಂಧ 11 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com