ಬಿಹಾರದಲ್ಲಿ ಬಿಜೆಪಿ ಗೆದ್ದರೆ ಇಡೀ ದೇಶವೇ ಪ್ರಪಾತಕ್ಕೆ ಬಿದ್ದಂತೆ: ನಿತಿಶ್

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಒಂದು ವೇಳೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಗೆದ್ದು ಅಧಿಕಾರಕ್ಕೆ ಬಂದರೆ ಇಡೀ ದೇಶವೇ ಪ್ರಪಾತಕ್ಕೆ ಬೀಳಲಿದೆ...
ನಿತಿಶ್ ಕುಮಾರ್
ನಿತಿಶ್ ಕುಮಾರ್
Updated on: 

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಒಂದು ವೇಳೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಗೆದ್ದು ಅಧಿಕಾರಕ್ಕೆ ಬಂದರೆ ಇಡೀ ದೇಶವೇ ಪ್ರಪಾತಕ್ಕೆ ಬೀಳಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಗುರುವಾರ ಎಚ್ಚರಿಸಿದ್ದಾರೆ.

ಆಕಸ್ಮೀಕವಾಗಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಇಡೀ ದೇಶವೇ ಆಳವಾದ ಪ್ರಪಾತಕ್ಕೆ ಬೀಳುವುದು ನಿಶ್ಚಿತ. ಕಳೆದ 17 ತಿಂಗಳ ಆಡಳಿತದಲ್ಲಿ ಅವರು (ಬಿಜೆಪಿ) ಯಾವುದೇ ಮಹತ್ವದ ಕೆಲಸ ಮಾಡಿಲ್ಲ. ಅಲ್ಲದೆ ಲೋಕಸಭಾ ಚುನಾವಣೆ ವೇಳೆ ಜನರಿಗೆ ನೀಡಿದ್ದ ಯಾವುದೇ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ ಮತ್ತು ಉತ್ತಮ ಆಡಳಿತವೂ ನೀಡಿಲ್ಲ ಎಂದು ಎಎನ್‌ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಿತೀಶ್‌ ಕುಮಾರ್ ಆರೋಪಿಸಿದ್ದಾರೆ.

ಬಿಜೆಪಿ ಇದುವರೆಗೂ ರಾಜ್ಯ ಚುನಾವಣೆಗಳಲ್ಲಿ ಗೆಲುವುದಕ್ಕೆ ಮಾತ್ರ ಆದ್ಯತೆ ನೀಡಿದ್ದು. ಅವರಿಗೆ ಕೇಂದ್ರದಲ್ಲಿ ಆಡಳಿತ ನಡೆಸುವುದಕ್ಕೆ ಮಾತ್ರವೇ ಜನಾದೇಶ ಸಿಕ್ಕಿದೆ. ಆದರೆ ಸಂಪೂರ್ಣ ಅಧಿಕಾರವನ್ನು ಬಾಚಿಕೊಳ್ಳುವುದನ್ನೇ ಅವರು ತಮ್ಮ ಗುರಿಯಾಗಿ ಮಾಡಿಕೊಂಡಿದ್ದಾರೆ ಮತ್ತು ಅದಕ್ಕಾಗಿ ರಣತಂತ್ರವನ್ನು ಹೆಣೆಯುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ನಿತೀಶ್‌ ಟೀಕಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಮುಕ್ತಾಯದ ಹಂತಕ್ಕೆ ಬರುತ್ತಿರುವ ಸಂದರ್ಭದಲ್ಲಿ ಸಿಎಂ ನಿತಿಶ್ ಕುಮಾರ್ ಅವರು ಮೂರನೇ ಬಾರಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಅಲ್ಲದೆ ಮಹಾ ಮೈತ್ರಿ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇಲ್ಲ ಎಂದು ಸ್ಪಷ್ಟಪಡಿಸಿದರು,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com