ಉತ್ತರ ಪ್ರದೇಶದ ಸರ್ಕಾರದಿಂದ 8 ಸಚಿವರ ವಜಾ

ಉತ್ತರ ಪ್ರದೇಶದ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲು ಸಮಾಜವಾದಿ ಪಕ್ಷ ಮುಂದಾಗಿದ್ದು...
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
ಉತ್ತರ ಪ್ರದೇಶ: ಉತ್ತರ ಪ್ರದೇಶದ ಸರ್ಕಾರದಿಂದ ಎಂಟು ಸಚಿವರನ್ನು ಗುರುವಾರ ಅಮಾನತುಗೊಳಿಸಲಾಗಿದೆ.
ಉತ್ತರ ಪ್ರದೇಶದ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲು ಸಮಾಜವಾದಿ ಪಕ್ಷ ಮುಂದಾಗಿದ್ದು. ಎಂಟು ಸಚಿವರನ್ನು ಅಮಾನತುಗೊಳಿಸಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆದೇಶ ಹೊರಡಿಸಿದ್ದಾರೆ.
ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. 
ಅಮಾನತುಗೊಂಡವರಲ್ಲಿ ಐವರು ಕ್ಯಾಬಿನೆಟ್ ಸಚಿವರಾಗಿದ್ದರು, ಇನ್ನು ಮೂವರು ರಾಜ್ಯ ಖಾತೆ ಸಚಿವರಾಗಿದ್ದರು. ಮತ್ತೆ 14 ಮಂದಿ ಹೊಸಬರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಚಿಂತನೆ ನಡೆಸಲಾಗಿದ್ದು, ಈ ಸಂಬಂಧ ಇಂದು ಬೆಳಿಗ್ಗೆ ರಾಜ್ಯಪಾಲ ರಾಮ್ ನಾಯ್ಕ್ ಅವರನ್ನು ಭೇಟಿ ಮಾಡಿದ ಅಖಿಲೇಶ್ ಯಾದವ್ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. 
ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ದೊಡ್ಡ ಪ್ರಮಾಣದ ಸೋಲನ್ನು ಅನುಭವಿಸಿದ ನಂತರವೇ ಅಖಿಲೇಶ್ ಯಾದವ್ ಅವರು ತಮ್ಮ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ ಮಾಡಬೇಕು ಎಂದು ತಿಳಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಈಗ ಸಚಿವ ಸಂಪುಟ ಪುನರ್ರಚನೆ ಬಗ್ಗೆ ಚಿಂತನೆ ನಡೆಸಿದ್ದು, ವಿಧಾನಸಭಾ ಚುನಾವಣೆಗೆ ಇನ್ನು ಎರಡು ವರ್ಷ ಇರುವಾಗಲೇ ತಮ್ಮ ಸಂಪುಟಕ್ಕೆ ಹೊಸಬರನ್ನು ಆಯ್ಕೆ ಮಾಡಲು ಅಖಿಲೇಶ್ ಮುಂದಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com