ನೆಹರೂ-ಇಂದಿರಾಗೆ ಮೋದಿ ಸರ್ಕಾರದಿಂದ ಅವಮಾನ: ತರುಣ್ ಗೊಗೋಯ್

ಶ್ರೀಮಂತ ಪರಂಪರೆಯನ್ನು ಹೊಂದಿದ್ದ ಭಾರತ ಮಾಜಿ ಪ್ರಧಾನಮಂತ್ರಿಗಳಾದ ಜವಾಹರ್ ಲಾಲ್ ನೆಹರು ಹಾಗೂ ಇಂದಿರಾ ಗಾಂಧಿಯವರಿಗೆ ನರೇಂದ್ರ ಮೋದಿ ಸರ್ಕಾರ ಅವಮಾನ ಮಾಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ತರುಣ್...
ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ (ಸಂಗ್ರಹ ಚಿತ್ರ)
ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ (ಸಂಗ್ರಹ ಚಿತ್ರ)

ಗುವಾಹಟಿ: ಶ್ರೀಮಂತ ಪರಂಪರೆಯನ್ನು ಹೊಂದಿದ್ದ ಭಾರತ ಮಾಜಿ ಪ್ರಧಾನಮಂತ್ರಿಗಳಾದ ಜವಾಹರ್ ಲಾಲ್ ನೆಹರು ಹಾಗೂ ಇಂದಿರಾ ಗಾಂಧಿಯವರಿಗೆ ನರೇಂದ್ರ ಮೋದಿ ಸರ್ಕಾರ ಅವಮಾನ ಮಾಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಅವರು ಶುಕ್ರವಾರ ಹೇಳಿದ್ದಾರೆ.

ಗುರುವಾರ ನವದೆಹಲಿಯಲ್ಲಿ ನಡೆದ 2015 ಭಾರತ-ಆಫ್ರಿಕಾ ಶೃಂಗಸಭೆಯಲ್ಲಿ ಇಡೀ ಪ್ರಪಂಚವೇ ಭಾರತ ಮಾಜಿ ಪ್ರಧಾನಿಗಳಾದ ಜವಹರ್ ಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಅವರಿಗೆ ಮೋದಿಯವರ ಮುಂದೆ ಹಾಡಿನ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಮೋದಿಯವರು ಕೆಲವು ಅತಿರೇಕಧ ಕ್ರಿಯೆಗಳನ್ನು ಸೂಚಿಸುವ ಮೂಲಕ ಅವರಿಗೆ ಅವಮಾನ ಮಾಡಿದ್ದಾರೆಂದು ಹೇಳಿದ್ದಾರೆ.

ನೆಹರೂ ಹಾಗೂ ಇಂದಿರಾ ಅವರು ದೇಶ ಕಂಡ ಮಹಾನ್ ದಾರ್ಶನಿಕ ನಾಯಕರಾಗಿದ್ದು, ಆಫ್ರಿಕ ಮತ್ತು ಭಾರತದ ನಡುವಿನ ಸಂಬಂಧ ವೃದ್ಧಿಗೆ ಅಡಿಪಾಯ ಹಾಕಿಕೊಟ್ಟ ನಾಯಕರಾಗಿದ್ದಾರೆ. ಇಂದಿನ ಆಧುನಿಕ ಭಾರತಕ್ಕೆ ಅಡಿಪಾಯ ಹಾಕಿಕೊಟ್ಟವರು ಈ ನಾಯಕರು. ಇಂದು ಈ ಇಬ್ಬರು ನಾಯಕರಿಗೆ ಇಡೀ ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸುವ ವೇಳೆ ಮೋದಿಯವರು ಅವಮಾನ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com