ಶೀನಾ ಹತ್ಯೆ ಪ್ರಕರಣ: ಇಂದ್ರಾಣಿ ನ್ಯಾಯಾಂಗ ಬಂಧನ ವಿಸ್ತರಣೆ

ಶೀನಾ ಬೋರಾ ಹತ್ಯೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಆಕೆಯ ತಾಯಿ ಇಂದ್ರಾಣಿ ಮುಖರ್ಜಿ ಹಾಗೂ ಇತರೆ ಇಬ್ಬರು...
ಶೀನಾ ಬೋರಾ - ಇಂದ್ರಾಣಿ ಮುಖರ್ಜಿ
ಶೀನಾ ಬೋರಾ - ಇಂದ್ರಾಣಿ ಮುಖರ್ಜಿ
Updated on

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಆಕೆಯ ತಾಯಿ ಇಂದ್ರಾಣಿ ಮುಖರ್ಜಿ ಹಾಗೂ ಇತರೆ ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ನವೆಂಬರ್ 7ರವರೆಗೆ ವಿಸ್ತರಿಸಲಾಗಿದೆ.

ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು ಇಂದು ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಾದ ಇಂದ್ರಾಣಿ ಮುಖರ್ಜಿ, ಆಕೆಯ ಮಾಜಿ ಪತಿ ಸಂಜೀವ್ ಖನ್ನಾ ಹಾಗೂ ಚಾಲಕ ಶ್ಯಾಮ್ ರೈ ನ್ಯಾಯಾಂಗ ಬಂಧನ ಅವಧಿಯನ್ನು ಒಂದು ವಾರಗಳ ಕಾಲ ವಿಸ್ತರಿಸಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಮನವಿ ಮಾಡಿತು. ಈ ಮುಂಚೆ ಅಕ್ಟೋಬರ್ 31ರವರೆಗೆ ಜೈಲಿನಲ್ಲೇ ಆರೋಪಿಗಳ ವಿಚಾರಣೆಗೆ ನ್ಯಾಯಾಲಯ ಅವಕಾಶ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com