ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ದೇಶದ ಮೊದಲ ಪ್ರಧಾನಿಯಾಗಬೇಕಿತ್ತು: ವೆಂಕಯ್ಯನಾಯ್ಡು

ಉಕ್ಕಿನ ಮನುಷ್ಯ ಎಂದೇ ಪ್ರಸಿದ್ದವಾಗಿದ್ದ ದಿವಂಗತ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ದೇಶದ ಮೊದಲ ಪ್ರಧಾನಿ ಆಗಬೇಕಿತ್ತು. ಆದರೆ ಆದದ್ದೇ ಬೇರೆ...
ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು

ನವದೆಹಲಿ: ಉಕ್ಕಿನ ಮನುಷ್ಯ ಎಂದೇ ಪ್ರಸಿದ್ದವಾಗಿದ್ದ ದಿವಂಗತ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ದೇಶದ ಮೊದಲ ಪ್ರಧಾನಿ ಆಗಬೇಕಿತ್ತು. ಆದರೆ ಆದದ್ದೇ ಬೇರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಂ. ವೆಕಯ್ಯನಾಯ್ಡು ಹೇಳಿದ್ದಾರೆ.

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 140 ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸರ್ದಾರ್ ವಲಭಬಾಯಿ ಅವರ ಆದರ್ಶಗಳು ಇಂದಿಗೂ ನಮಗೆ ಸ್ಪೂರ್ತಿಯಾಗಿದೆ. ಅವರ ಬೋಧನೆ ಹಾಗೂ ಉಪದೇಶಗಳನ್ನು ನಾವು ಅನುಸರಿಸಿದರೇ ಪಟೇಲ್ ಅವರ ರಾಷ್ಟ್ರೀಯ ಏಕತಾ ದಿವಸ್ ಆಚರಣೆಗೆ ಅರ್ಥ ಸಿಗುತ್ತದೆ ಎಂದು ಅವರು ಹೇಳಿದ್ದಾರೆ.

ನಮ್ಮ ದೇಶದ ಇತಿಹಾಸ ಪಟೇಲ್ ಅವರಿಗೆ ನ್ಯಾಯ ಒದಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ವೆಂಕಯ್ಯ ನಾಯ್ಡು, ದೇಶದ ಏಕತೆ ಹಾಗೂ ಸಮಗ್ರತೆಗಾಗಿ ಹೋರಾಡಿದ ಪಟೇಲ್ ಅವರು ಮಾತ್ರ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com