ಲಖನೌ: ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಅರ್ಧದಲ್ಲೇ ನಿಲ್ಲಿಸುವಂತೆ ಆದೇಶಿಸಿ ಉತ್ತರ ಪ್ರದೇಶದ ರಾಜ್ಯಪಾಲ ರಾಮ್ ನಾಯಕ್ ವಿವಾದಕ್ಕೆ ಒಳಗಾಗಿದ್ದಾರೆ.
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 140ನೇ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾವಿಧಿ ಪೂರ್ಣಗೊಂಡಿರದ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಷ್ಟ್ರಗೀತೆಯನ್ನು ಅರ್ಧದಲ್ಲೇ ನಿಲ್ಲಿಸುವಂತೆ ಆದೇಶಿಸಿದ್ದರು.
ರಾಜ್ಯಪಾಲರ ಆದೇಶದಂತೆ ರಾಷ್ಟ್ರಗೀತೆಯನ್ನು ಮಧ್ಯದಲ್ಲೇ ನಿಲ್ಲಿಸಲಾಯಿತು. ಆದರೆ ತಕ್ಷಣ ವಿವಾದ ಭುಗಿಲೆದ್ದಿದ್ದು, ರಾಜ್ಯಪಾಲರು ರಾಷ್ಟ್ರಗೀತೆಯನ್ನು ಅವಮಾನಿಸಿದ್ದಾರೆ. ತಕ್ಷಣ ಕ್ಷಮೆ ಕೇಳಬೇಕು ಎಂದು ವಿರೋಧ ಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ.
ಸಣ್ಣ ಗೊಂದಲದಿಂದ ಹೀಗಾಗಿದೆ. ರಾಷ್ಟ್ರಗೀತೆಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ ಎಂದು ಬಳಿಕ ರಾಜಭವನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿತು.