

ಪಾಟ್ನ: ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಭಾನುವಾರ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ.
ನಾಲ್ಕನೇ ಹಂತದ ಈ ಚುನಾವಣೆಯು ಇಂದು ಬೆಳಿಗ್ಗೆ 7 ರಿಂದ 5 ಗಂಟೆಯವರೆಗೂ ನಡೆಯಲಿದ್ದು, ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ಈಗಾಗಲೇ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇಂದು ನಡೆಯುತ್ತಿರುವ ಮತದಾನ ಪ್ರಕ್ರಿಯೆಯು 55 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು ಚುನಾವಣೆಗಾಗಿ 14, 139 ಮತಗಟ್ಟೆ ಸ್ಥಾಪಿಸಲಾಗಿದೆ. ಸುಮಾರು 1. 46 93, 294 ಕೋಟಿ ಮತದಾರರು ಭಾಗವಹಿಸಲಿದ್ದಾರೆ. ಚುನಾವಣೆಯಲ್ಲಿ 57 ಮಹಿಳಾ ಅಭ್ಯರ್ಥಿಗಳು ಸೇರಿದಂದೆ ಒಟ್ಟು 776 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಮತದಾನ ಪ್ರಕ್ರಿಯೆಗೆ ಯಾವುದೇ ತೊಡಕಾಗದಂತೆ ಎಚ್ಚರಿಕೆ ವಹಿಸಿರುವ ಚುನಾವಣಾ ಆಯೋಗವು ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಿದೆ
ಇನ್ನುಳಿದಂತೆ 1 ಸುತ್ತಿನ ಮತದಾನವು ನವೆಂಬರ್ 5ರಂದು ನಡೆಯಲಿದ್ದು, ಚುನಾವಣೆಯ ಫಲಿತಾಂಶವು ನ. 8ರಂದು ಪ್ರಕಟವಾಗಲಿದೆ.