ಭಾರತ್ ಬಂದ್: ಟಿಎಂಸಿ- ಸಿಪಿಐ(ಎಂ) ಕಾರ್ಯಕರ್ತರ ನಡುವೆ ಮಾರಾಮಾರಿ

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಕೋಲ್ಕತ್ತಾದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಿಪಿಐ(ಎಂ) ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಕೊಲ್ಕತ್ತಾದಲ್ಲಿ ಸಿಪಿಐ(ಎಂ)- ಟಿಎಂಸಿ ಕಾರ್ಯಕರ್ತರ ನಡುವೆ ಮಾರಾಮಾರಿ(ಎಎನ್ ಐ ಚಿತ್ರ)
ಕೊಲ್ಕತ್ತಾದಲ್ಲಿ ಸಿಪಿಐ(ಎಂ)- ಟಿಎಂಸಿ ಕಾರ್ಯಕರ್ತರ ನಡುವೆ ಮಾರಾಮಾರಿ(ಎಎನ್ ಐ ಚಿತ್ರ)

ಕೋಲ್ಕತ್ತ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಕೋಲ್ಕತ್ತಾದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಿಪಿಐ(ಎಂ) ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.   

ಬಹರಾಂಪುರದಲ್ಲಿ ಈ ಘಟನೆ ನಡೆದಿದ್ದು ಬಂದ್ ವೇಳೆ ನಡೆದಿರುವ ಹಲ್ಲೆ ಪ್ರಕರಣದಲ್ಲಿ 6 ಮಂದಿ ಸಿಪಿಐ(ಎಂ) ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂದ್ ವೇಳೆ ನಡೆಯುತ್ತಿದ್ದ ಮೆರವಣಿಗೆ ಮೇಲೆ ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರು ದಾಳಿ ನಡೆಸಿದ್ದು ತನ್ನ 15 ಜನ ಕಾರ್ಯಕರ್ತರಿಗೆ ಗಾಯಗಳಾಗಿವೆ ಎಂದು ಸಿಪಿಐ(ಎಂ) ಆರೋಪಿಸಿದೆ.

ಬಂದ್ ನ್ನು ಬೆಂಬಲಿಸಿ ನಡೆಸುತ್ತಿದ್ದ ಮೆರವಣಿಗೆ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಸಂಸದ ಮೈನುಲ್ ಹಸನ್ ಸೇರಿದಂತೆ 15 ಜನರು ಗಾಯಗೊಂಡಿದ್ದಾರೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸಚ್ಚಿದಾನಂದ ಕಂಡಾರಿ ಹೇಳಿದ್ದಾರೆ. ಸಿಪಿಐ(ಎಂ) ಆರೋಪವನ್ನು ತಳ್ಳಿಹಾಕಿರುವ ಟಿಎಂಸಿ, ಸಿಪಿಐ ಕಾರ್ಯಕರ್ತರೇ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com