ಗಡಿಯಲ್ಲಿ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ

ಭಾರತದಲ್ಲಿ ವಿದ್ವಂಸಕ ಕೃತ್ಯ ಎಸಗುವ ಉದ್ದೇಶದೊಂದಿಗೆ ಅಕ್ರಮವಾಗಿ ಗಡಿಯೊಳಗೆ ನುಸುಳಿದ್ದ ಇಬ್ಬರು ಪಾಕ್ ಮೂಲದ ಉಗ್ರರನ್ನು ಇತ್ತೀಚೆಗಷ್ಟೇ ಭಾರತೀಯ ಭದ್ರತಾ ಪಡೆಗಳು...
ಗುಂಡಿನ ಕಾಳಗ
ಗುಂಡಿನ ಕಾಳಗ
Updated on: 

ಜಮ್ಮು: ಭಾರತದಲ್ಲಿ ವಿದ್ವಂಸಕ ಕೃತ್ಯ ಎಸಗುವ ಉದ್ದೇಶದೊಂದಿಗೆ ಅಕ್ರಮವಾಗಿ ಗಡಿಯೊಳಗೆ ನುಸುಳಿದ್ದ ಇಬ್ಬರು ಪಾಕ್ ಮೂಲದ ಉಗ್ರರನ್ನು ಇತ್ತೀಚೆಗಷ್ಟೇ ಭಾರತೀಯ ಭದ್ರತಾ ಪಡೆಗಳು ಸಜೀವವಾಗಿ ಬಂಧಿಸಿದ್ದರು. ಇದರ ಬೆನ್ನಲ್ಲೇ ಮತ್ತೆ ಉಗ್ರರು ಜಮ್ಮು ಕಾಶ್ಮೀರದ ಬಾರಾಮೂಲಾ ಜಿಲ್ಲೆಯ ರಫೀದಾಬಾದ್‌ನಲ್ಲಿ ಗಡಿಯೊಳಗೆ ನುಸುಳಿದ್ದು ಗುಂಡಿನ ದಾಳಿ ನಡೆಸಿದ್ದಾರೆ ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ.

ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆಯೊಂದಿಗೆ ನಂಟಿರುವ ಇಬ್ಬರು ಉಗ್ರರು ಬಾರಾಮೂಲಾ ಪ್ರದೇಶದಲ್ಲಿ ಅಡಗಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ.

ಬಾರಾಮೂಲಾ ಜಿಲ್ಲೆಯ ಉರಿ ವಲಯದಲ್ಲಿ ಕಳೆದ ಆಗಸ್ಟ್‌ 26ರಂದು ಗಡಿ ನಿಯಂತ್ರಣ ರೇಖೆಗೆ ಸಮೀಪ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದ. ಭಾರತ ಮತ್ತು ಪಾಕಿಸ್ಥಾನ ನಡುವೆ ಇತ್ತೀಚೆಗೆ ಉಭಯ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗಳು ರದ್ದಾದ ಬಳಿಕ ಗಡಿ ನಿಯಂತ್ರಣ ರೇಖೆಯಲ್ಲಿ ಉದ್ವಿಗ್ನ ಪರಿಸ್ಥಿತಿ ತೀವ್ರಗೊಂಡಿದ್ದು ಭದ್ರತಾ ಪಡೆಗಳ ಒಟ್ಟು ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಜೀವಂತ ಸೆರೆ ಸಿಕ್ಕಿದ್ದಾರೆ ಮತ್ತು ಹಲವು ಮಂದಿ ಸಾರ್ವಜನಿಕರು ಹತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com