

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ ಅಭಿಯಾನದ ಮುಖ್ಯಸ್ಥೆ ವಿಜಯಲಕ್ಷ್ಮಿ ಅವರು ಸ್ವಯಂನಿವೃತ್ತಿ ಘೋಷಿಸಿದ್ದಾರೆ.
ಸ್ವಚ್ಛ ಭಾರತ ಅಭಿಯಾನದ ಮುಖ್ಯಸ್ಥೆಯಾಗಿದ್ದ ವಿಜಯಲಕ್ಷ್ಮೀ ಜೋಶಿ ಅವರು ವೈಯಕ್ತಿಕ ಕಾರಣಗಳಿಂದಾಗಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದು, ಇವರ ಸ್ವಯಂ ನಿವೃತ್ತಿ ಅರ್ಜಿಯನ್ನು ಕೇಂದ್ರ ಸರ್ಕಾರ ಸ್ವೀಕರಿಸಿದೆ. 1980 ಬ್ಯಾಚ್ ನಲ್ಲಿ ಐಎಎಸ್ ಪಾಸ್ ಮಾಡಿದ್ದ ವಿಜಯಲಕ್ಷ್ಮೀ ಅವರು, ಗುಜರಾತ್ ನ ಕೆಡಾರ್ ನ ಐಎಎಸ್ ಅಧಿಕಾರಿಯಾಗಿದ್ದರು.