ಮುಂಬಯಿ ಆರ್ ಬಿ ಐ ಕಟ್ಟಡದಲ್ಲಿ ಅಗ್ನಿ ಅವಘಡ

ಮುಂಬಯಿನ ಬಾಂದ್ರಾ ಕುರ್ಲಾ ಸಂಕೀರ್ಣದಲ್ಲಿನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ಕಟ್ಟಡಕ್ಕೆ ಶುಕ್ರವಾರ ಆಕಸ್ಮಿಕ ಬೆಂಕಿ ಬಿದ್ದಿದೆ...
ಬೆಂಕಿಯಿಂದ ಹಾನಿಗೊಳಗಾದ ಮುಂಬಯಿ ಆರ್ ಬಿಐ ಕಟ್ಟಡ
ಬೆಂಕಿಯಿಂದ ಹಾನಿಗೊಳಗಾದ ಮುಂಬಯಿ ಆರ್ ಬಿಐ ಕಟ್ಟಡ
Updated on: 

ಮುಂಬೈ: ಮುಂಬಯಿನ ಬಾಂದ್ರಾ ಕುರ್ಲಾ ಸಂಕೀರ್ಣದಲ್ಲಿನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ಕಟ್ಟಡಕ್ಕೆ ಶುಕ್ರವಾರ ಆಕಸ್ಮಿಕ ಬೆಂಕಿ ಬಿದ್ದಿದೆ. ಆರ್‌ಬಿಐ ಕಟ್ಟಡದಲ್ಲಿ ಬೆಳಿಗ್ಗೆ 8.30ಕ್ಕೆ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿ ಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಗ್ನಿ ಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಆರ್ ಬಿ ಐ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಳಿಗ್ಗೆ 8.30ರ ಸುಮಾರಿಗೆ ಸ್ಫೋಟದ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದಲ್ಲಿನ ಕೇಂದ್ರೀಯ ಬ್ಯಾಂಕ್ ಕಚೇರಿಯಲ್ಲಿ ಬೆಂಕಿಯ ಅವಘಡ ಸಂಭವಿಸದೆ. ಬೆಂಕಿ ನಿಯಂತ್ರಣದಲ್ಲಿದ್ದು, ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಆರ್‌ಬಿಐ ವಕ್ತಾರರು ತಿಳಿಸಿದ್ದಾರೆ.

ಇನ್ನು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com