ಔರಂಗಜೇಬ್ ರಸ್ತೆಗೆ ಮರುನಾಮಕರಣ: ಪಿಐಎಲ್ ಗೆ ಕೇಂದ್ರದಿಂದ ಉತ್ತರ ಕೇಳಿದ ದೆಹಲಿ ಹೈಕೋರ್ಟ್

ದೆಹಲಿಯ ಔರಂಗಜೇಬ್ ರಸ್ತೆಗೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಮ್ ಅವರ ಹೆಸರನ್ನು ಮರುನಾಮಕರಣ ಮಾಡಿರುವ ವಿಷಯ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್

ನವದೆಹಲಿ: ದೆಹಲಿಯ ಔರಂಗಜೇಬ್ ರಸ್ತೆಗೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಮ್ ಅವರ ಹೆಸರನ್ನು ಮರುನಾಮಕರಣ ಮಾಡಿರುವ ವಿಷಯ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.

ಔರಂಗಜೇಬ್ ರಸ್ತೆಗೆ ಮರುನಾಮಕರಣ ಮಾಡುತ್ತಿರುವುದನ್ನು ವಿರೋಧಿಸಿ ದೆಹಲಿಯ ನಾಗರಿಕರೊಬ್ಬರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ. ಹೊಸ ರಸ್ತೆಗಳಿಗೆ ಅಗಲಿದ ಗಣ್ಯ ವ್ಯಕ್ತಿಗಳ ಹೆಸರನ್ನು ನಾಮಕರಣ ಮಾಡಬಹುದೇ ಹೊರತು ಐತಿಹಾಸಿಕವಾಗಿ ಗುರುತಿಸಿಕೊಂಡಿರುವ ರಸ್ತೆಗಳಿಗೆ ಹೊಸದಾಗಿ ಮರುನಾಮಕರಣ ಮಾಡಬಾರದು ಎಂದು ಪಿಐಎಲ್ ಸಲ್ಲಿಸಿರುವ ಅರ್ಜಿದಾರರ ಪರ ವಕೀಲ ವಾಸಿಂ ಆಲಂ ವಾದ ಮಂಡಿಸಿದ್ದಾರೆ.

ಪಿಐಎಲ್ ವಿಚಾರಣೆ ನಡೆಸಿರುವ ನ್ಯಾ.ಜಿ ರೋಹಿಣಿ ಹಾಗೂ ಜಯಂತ್ ನಾಥ್ ಅವರಿದ್ದ ವಿಭಾಗೀಯ ಪೀಠ, ಔರಂಗಜೇಬ್ ರಸ್ತೆಗೆ ಮರುನಾಮಕರಣ ಮಾಡಿರುವುದರ ಬಗ್ಗೆ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರಿಂದ ಸ್ಪಷ್ಟನೆ ಕೇಳಿದೆ. ಮರುನಾಮಕರಣಕ್ಕೆ ಸಂಬಂಧಿಸಿದಂತೆ ಕಡ್ಡಾಯ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೇ ಎಂಬುದನ್ನು ಸೆ.22 ರೊಳಗೆ ತಿಳಿಸಿ ಎಂದು kOrT ಹೆಚ್ಚುವರಿ ಸಾಲಿಸಿಟರ್ ಜನರಲ್ ಗೆ ಆದೇಶಿಸಿದೆ.

ಕೋರ್ಟ್ ಗೆ ಪ್ರತಿಕ್ರಿಯೆ ನೀಡಿರುವ ಎ.ಎಸ್.ಜಿ ರಾಷ್ಟ್ರದ ಗಣ್ಯ ವ್ಯಕ್ತಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ ಔರಂಗಜೇಬ್ ರಸ್ತೆಗೆ ಮರುನಾಮಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ. ಮರುನಾಮಕರಣ ಮಾಡುವ ನಿರ್ಧಾರ ಕೈಗೊಳ್ಳಲು ದೆಹಲಿ ಪುರಸಭೆಗೆ ಸಂಪೂರ್ಣ ಅಧಿಕಾರವಿದೆ ಎಂದು ಎ.ಎಸ್.ಜಿ ಕೋರ್ಟ್ ಗೆ ತಿಳಿಸಿದ್ದಾರೆ.  ಔರಂಗಜೇಬ್ ರಸ್ತೆಗೆ ಅಬ್ದುಲ್ ಕಲಾಂ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ, ಮಹೇಶ್ ಗಿರಿ ಸೇರಿದಂತೆ ಹಲವರು ದೆಹಲಿ ಪುರಸಭೆಗೆ ಮನವಿ ಮಾಡಿದ್ದರು. ಆಗಸ್ಟ್.28 ರಂದು ಔರಂಗಜೇಬ್ ರಸ್ತೆಗೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರನ್ನು ಮರುನಾಮಕರಣ ಮಾಡುವ ಬಗ್ಗೆ ಅವಿರೋಧ ನಿರ್ಣಯ ಕೈಗೊಳ್ಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com