ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಂತೆ ಶಿಕ್ಷಕರಿಗೆ ಪ್ರಧಾನಿ ಕರೆ

ಮಕ್ಕಳಿಗೆ ಸೃಜನಶೀಲರಾಗಲು ಸ್ಫೂರ್ತಿ ನೀಡುವುದಲ್ಲದೆ, ಬೋಧನೆಯ ಅಂಗವಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಅದನ್ನು ಸಕ್ರಿಯವಾಗಿ ಬಳಸುವಂತೆ
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on: 

ನವದೆಹಲಿ: ಮಕ್ಕಳಿಗೆ ಸೃಜನಶೀಲರಾಗಲು ಸ್ಫೂರ್ತಿ ನೀಡುವುದಲ್ಲದೆ, ಬೋಧನೆಯ ಅಂಗವಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಅದನ್ನು ಸಕ್ರಿಯವಾಗಿ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನಾಚರಣೆಯ ಅಂಗವಾಗಿ  ಕರೆ ನೀಡಿದ್ದಾರೆ.

ಶಿಕ್ಷರ ದಿನಾಚರಣೆಯ ಅಂಗವಾಗಿ ರಾಷ್ಟ್ರಪ್ರಶಸ್ತಿ ಪಡೆದ ಶಿಕ್ಷಕರ ಜೊತೆಗೆ ಸಭೆ ನಡೆಸಿದ ಪ್ರಧಾನಿ, ದೇಶದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವತ್ತ ಶಿಕ್ಷಕರ ಸಮುದಾಯ ಸದಾ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.

ಶಿಕ್ಷಕರು ತಂತ್ರಜ್ಞನಾವನ್ನು ಅಳವಡಿಸಿಕೊಂಡು ಅದನ್ನು ಬೋಧನೆಗೆ ಬಳಸಬೇಕು ಹಾಗು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಶಿಕ್ಷಕರಿಗೆ ಪ್ರಧಾನಿ ಕರೆ ನೀಡಿದರು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಹಾಗೆಯೇ ವಿದ್ಯಾರ್ಥಿಗಳಲ್ಲಿ ಸ್ವಚ್ಛತಾ ಮನೋಭಾವ ಮೂಡಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಕೂಡ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ರಾಜ್ಯ ಸಚಿವ ರಾಮ್ ಶಂಕರ್ ಕಥೇರಿಯಾ ಕೂಡ ಹಾಜರಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com