ಮಾಜಿ ಸೈನಿಕರ ಹೋರಾಟಕ್ಕೆ ಮಣಿದ ಕೇಂದ್ರ, ಇಂದು ಒಆರ್‌ಒಪಿ ಯೋಜನೆ ಜಾರಿ ಸಾಧ್ಯತೆ

ಕಡೆಗೂ ಮಾಜಿ ಸೈನಿಕರ ಹೋರಾಟಕ್ಕೆ ಮಣಿದಿರುವ ನರೇಂದ್ರ ಮೋದಿ ಸರ್ಕಾರ 'ಸಮಾನ ಶ್ರೇಣಿ, ಸಮಾನ ಪಿಂಚಣಿ(ಒಆರ್‌ಒಪಿ)' ಯೋಜನೆಯನ್ನು ಇಂದಿನಿಂದ...
ಪ್ರತಿಭಟನಾ ನಿರತ ಮಾಜಿ ಸೈನಿಕರು
ಪ್ರತಿಭಟನಾ ನಿರತ ಮಾಜಿ ಸೈನಿಕರು

ನವದೆಹಲಿ: ಕಡೆಗೂ ಮಾಜಿ ಸೈನಿಕರ ಹೋರಾಟಕ್ಕೆ ಮಣಿದಿರುವ ನರೇಂದ್ರ ಮೋದಿ ಸರ್ಕಾರ 'ಸಮಾನ ಶ್ರೇಣಿ, ಸಮಾನ ಪಿಂಚಣಿ(ಒಆರ್‌ಒಪಿ)' ಯೋಜನೆಯನ್ನು ಇಂದಿನಿಂದ ಜಾರಿಗೊಳಿಸುವ ಸಾಧ್ಯತೆ ಇದೆ.

ಈ ಸಂಬಂಧ ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸುದ್ದಿಗೋಷ್ಠಿ ನಡೆಸಿ ಯೋಜನೆಯನ್ನು ಘೋಷಿಸುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ, 2014, ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಪ್ರತಿ ವರ್ಷ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಕಳೆದ ಆಗಸ್ಟ್ 14ರಿಂದ ಮಾಜಿ ಸೈನಿಕರು ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಅವರು ಎರಡು ವರ್ಷಳಿಗೊಮ್ಮೆ ಪಿಂಚಣಿ ಪರಿಷ್ಕರಣೆ ಮಾಡುವಂತೆ ತಮ್ಮ ನಿಲುವು ಸಡಿಲಿಸಿದ್ದಾರೆ. ಆದರೆ ಸರ್ಕಾರ 5 ವರ್ಷಗಳಿಗೊಮ್ಮೆ ಪರಿಷ್ಕರಣೆ ಮಾಡುವ ತನ್ನ ನಿಲುವನ್ನು ಸಡಿಲಿಸಿರಲಿಲ್ಲ. ಬಿಹಾರ ಚುನಾವಣೆ ಸಮೀಪಿಸುತ್ತಿರುವುದರಿಂದ ಅನಿವಾರ್ಯವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸುತ್ತಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com