
ಅಹಮದಾಬಾದ್: ಗುಜರಾತ್‌ನಲ್ಲಿ 'ಒಬಿಸಿ' ಸ್ಥಾನಕ್ಕಾಗಿ ಹೋರಾಟ ನಡೆಸುವ ಮೂಲಕ ಪಟೇಲ್ ಸಮುದಾಯದ ನಾಯಕನಾಗಿ ಹೊರ ಹೊಮ್ಮಿರುವ 21 ವರ್ಷದ ಯುವಕ ಹಾರ್ದಿಕ್ ಪಟೇಲ್, ಪ್ರತಿಭಟನೆಯ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬುದನ್ನು ಸೋಮವಾರ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.
ನಿನ್ನೆಯಷ್ಟೇ ಪಟೇಲ್ ಸಮುದಾಯದ ಕೆಲವು ನಾಯಕರು, ಹಾರ್ದಿಕ್ ಪಟೇಲ್ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ಬಗ್ಗೆ ಇಂದು ಸ್ಪಷ್ಟನೆ ನೀಡಿರುವ ಹಾರ್ದಿಕ್ ಪಟೇಲ್, ನನಗೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ನಾನಾಗಲಿ ಅಥವಾ ಪ್ರತಿಭಟನೆಯಲ್ಲಿ ಭಾಗವಹಿಸಿದ ಯಾರೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದಾರೆ.
Advertisement