ರಹಸ್ಯ ಕಾರ್ಯಾಚರಣೆ ಕುರಿತ ಹೇಳಿಕೆ ನಿರಾಕರಿಸಿದ ರಾಥೋಡ್

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿರುದ್ಧ ಭಾರತ ರಹಸ್ಯ ಕಾರ್ಯಾಚರಣೆ ಮಾಡುವ ಸಾಧ್ಯತೆ ಬಗ್ಗೆ ಹೇಳಿಕೆ ನೀಡಿರುವುದನ್ನು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ನಿರಾಕರಿಸಿದ್ದಾರೆ.
ರಾಜ್ಯವರ್ಧನ್ ಸಿಂಗ್ ರಾಥೋಡ್
ರಾಜ್ಯವರ್ಧನ್ ಸಿಂಗ್ ರಾಥೋಡ್

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿರುದ್ಧ ಭಾರತ ರಹಸ್ಯ ಕಾರ್ಯಾಚರಣೆ ಮಾಡುವ ಸಾಧ್ಯತೆ ಬಗ್ಗೆ ಹೇಳಿಕೆ ನೀಡಿರುವುದನ್ನು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ನಿರಾಕರಿಸಿದ್ದಾರೆ.

1993 ರ ಮುಂಬೈ ಸರಣಿ ಸ್ಫೋಟದ ರೂವಾರಿ ದಾವುದ್ ಇಬ್ರಾಹಿಮ್ ಮತ್ತು ಸಯ್ಯದ್ ಮೇಲೆ ಭಾರತ ರಹಸ್ಯ ಕಾರ್ಯಾಚರಣೆ ನಡೆಸುತ್ತಿರುವುದರ ಬಗ್ಗೆ 'ಸೀದಿ ಬಾತ್' ಕಾರ್ಯಕ್ರಮದಲ್ಲಿ ರಾಜ್ಯವರ್ಧನ್ ಸಿಂಗ್ ರಾಥೋಡ್ ಹೇಳಿಕೆ ನೀಡಿದ್ದಾರೆ ಎಂಬ ವರದಿ ಪ್ರಕಟವಾದ ಬೆನ್ನಲ್ಲೇ ರಾಥೋಡ್ ಸ್ಪಷ್ಟನೆ ನೀಡಿದ್ದಾರೆ.

ಹೇಳಿಕೆ ನೀಡಿರುವುದರ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯವರ್ಧನ್ ಸಿಂಗ್ ರಾಥೋಡ್,  ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಕಟಿಸಲಾಗಿದೆ ಎಂದಿದ್ದು, ಸಂದರ್ಶನದ ಲಿಂಕ್ ನ್ನೂ ಸಹ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ದಾವೂದ್ ಇಬ್ರಾಹಿಂ ವಿರುದ್ಧ   ರಹಸ್ಯ ಕಾರ್ಯಾಚರಣೆ ನಡೆಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದ ರಾಜ್ಯವರ್ಧನ್ ಸಿಂಗ್ ರಾಥೋಡ್ "ಅದು ಆಗಬಹುದು ಆದರೆ ಅದನ್ನು ನಾವು ಮುಂಚಿತವಾಗಿ ಪ್ರಚಾರ ಮಾಡುವುದಿಲ್ಲ. ಕಾರ್ಯಾಚರಣೆ ನಂತರವೂ ಕೂಡ ನಾವು ಪ್ರಚಾರ ಮಾಡಬಹುದು ಅಥವಾ ಮಾಡದೆ ಇರಬಹದು" ಎಂದು ಅವರು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com