ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ, 5 ಹಂತಗಳಲ್ಲಿ ಮತದಾನ

ಬಹು ನಿರೀಕ್ಷಿತ ಬಿಹಾರ ವಿಧಾನಸಭೆ ಚುನಾವಣೆಯ ದಿನಾಂಕ ಬುಧವಾರ ಪ್ರಕಟವಾಗಿದ್ದು, ಒಟ್ಟು ಐದು ಹಂತಗಳಲ್ಲಿ ಮತದಾನ ನಡೆಯಲಿದೆ.
ನಸೀಮ್ ಜೈದಿ
ನಸೀಮ್ ಜೈದಿ

ನವದೆಹಲಿ: ಬಹು ನಿರೀಕ್ಷಿತ ಬಿಹಾರ ವಿಧಾನಸಭೆ ಚುನಾವಣೆಯ ದಿನಾಂಕ ಬುಧವಾರ ಪ್ರಕಟವಾಗಿದ್ದು, ಒಟ್ಟು ಐದು ಹಂತಗಳಲ್ಲಿ ಮತದಾನ ನಡೆಯಲಿದೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ನಸೀಮ್ ಜೈದಿ ಅವರು, ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ 5 ಹಂತಗಳಲ್ಲಿ ಮತದಾನ ನಡೆಯಲಿದೆ ಎಂದರು.

ಸೆಪ್ಟೆಂಬರ್ 16ರಂದು ಬಿಹಾರ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಆಯುಕ್ತರು ತಿಳಿಸಿದರು.

ಅಕ್ಟೋಬರ್ 12ಕ್ಕೆ ಮೊದಲ ಹಂತ, ಅ.16ಕ್ಕೆ ಎರಡನೇ ಹಂತ, ಅ.28ಕ್ಕೆ ಮೂರನೇ ಹಂತ, ನವೆಂಬರ್ 1ರಂದು ನಾಲ್ಕನೆ ಹಂತ ಹಾಗೂ ನವೆಂಬರ್ 5ರಂದು ಐದನೇ ಹಂತದ ಮತದಾನ ನಡೆಯಲಿದೆ. ನವೆಂಬರ್ 8ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮತದಾರರ ಅನುಕೂಲಕ್ಕಾಗಿ ಇದೇ ಮೊದಲ ಬಾರಿಗೆ ಇವಿಎಂ ಮತಯಂತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರವನ್ನು ಪ್ರದರ್ಶಿಸಲಾಗುವುದು ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com