ಅಪ್ರಾಪ್ತೆಯನ್ನು ರೇಪ್ ಮಾಡಿ ಹತ್ಯೆಗೈದ ಕಾಮುಕನಿಗೆ ಜೀವಾವಧಿ ಶಿಕ್ಷೆ

ಐದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿಗೆ ಮುಂಬೈ ವಿಶೇಷ ನ್ಯಾಯಾಲಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಐದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿಗೆ ಮುಂಬೈ ವಿಶೇಷ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿಸಿದೆ.

2010ರಲ್ಲಿ ಸುರ್ಬಾನ್ ಕುರ್ಲಾದ ಸಮೀಪವಿರುವ ನೆಹರು ನಗರದಲ್ಲಿ ಜಾವೇದ್ ಶೇಖ್ ಎಂಬುವವನ್ನು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಜಾವೇದ್, ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು.

2010 ಜುಲೈ 1 ರಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. 2010 ಜೂನ್ 19ರಂದು ನೆಹರು ನಗರ ಸಮೀಪದಲ್ಲಿರುವ ವತ್ಸತಾಯ್ ನಗರದಲ್ಲಿದ್ದ ಪಾಳು ಬಿದ್ದ ಗುಡಿಸಲಿನಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಬಾಲಕಿ ನಾಪತ್ತೆಯಾಗಿದ್ದಾಳೆ ಎಂದು ಜೂನ್ 5ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 

ಅಪ್ರಾಪ್ತೆಯ ಮೇಲೆ ಅತ್ಯಾಚಾರವಾಗಿದೆ ಎಂದು ವೈದ್ಯಕೀಯ ಪರೀಕ್ಷೆಯು ದೃಢಪಡಿಸಿತ್ತು, ಅಲ್ಲದೇ, ಆರೋಪಿ ವಿರುದ್ಧ 45 ಜನ ಸಾಕ್ಷಿ ಹೇಳಿದ್ದರು. ಜಾವೇದ್ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com