ಜಮ್ಮು ಕಾಶ್ಮೀರದಲ್ಲಿ ಗೋಮಾಂಸ ನಿಷೇಧಕ್ಕೆ ಹೈಕೋರ್ಟ್ ಆದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಗೋಮಾಂಸ ಮಾರಾಟ ನಿಷೇಧ ಮಾಡುವಂತೆ ಹೈಕೋರ್ಟ್ಆದೇಶಿಸಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಗೋಮಾಂಸ ಮಾರಾಟ ನಿಷೇಧ ಮಾಡುವಂತೆ ಹೈ ಕೋರ್ಟ್ ಸೂಚಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಜಮ್ಮು ಕಾಶ್ಮೀರ ಹೈ ಕೋರ್ಟ್ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಗೋಮಾಂಸ ಮಾರಾಟದ ನಿಷೇಧವನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಕೋರ್ಟ್ ಪೊಲೀಸ್ ಮಹಾ ನಿರ್ದೇಶಕರಿಗೆ ಆದೇಶಿಸಿದೆ. ಬುಧವಾರವೇ ಹೈಕೋರ್ಟ್ ಈ ಆದೇಶ ನೀಡಿದ್ದೂ, ಇಂದು ಮಾಧ್ಯಮಗಳಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ.

ಗೋಮಾಂಸ ನಿಷೇಧ ಮಾಡಿರುವ ಹೈ ಕೋರ್ಟ್ ನೀತಿ ನಿಯಮ ಉಲ್ಲಂಘನೆಯಾಗದಂತೆ ಎಚ್ಚಕ ವಹಿಸುವಂತೆ ಪೊಲೀಸರಿಗೆ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com