ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎಂಐಎಂ ಸ್ಪರ್ಧೆ: ಒವೈಸಿ

ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಎ ಇತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಸ್ಪರ್ಧಿಸಲಿದೆ...
ಅಸಾದುದ್ದೀನ್ ಒವೈಸಿ
ಅಸಾದುದ್ದೀನ್ ಒವೈಸಿ

ಹೈದರಾಬಾದ್: ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಎ ಇತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಸ್ಪರ್ಧಿಸಲಿದೆ ಎಂದು ಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.

ಬಿಹಾರದ ಸೀಮಾಂಚಲ ಪ್ರದೇಶದಲ್ಲಿ ಎಐಎಂಐಎಂ ಕಣಕ್ಕೀಳಿಯಲಿದೆ ಎಂದು ಅಸಾದುದ್ದೀನ್ ಒವೈಸಿ ತಿಳಿಸಿದ್ದಾರೆ. ಆದರೆ ತಮ್ಮ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂಬುದು ಮಾತ್ರ ಒವೈಸಿ ಇನ್ನು ಬಹಿರಂಗಪಡಿಸಿಲ್ಲ.

ಅಕ್ಟೋಬರ್ 12ರಿಂದ 5 ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ನವೆಂಬರ್ 5ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಸೆಪ್ಟೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com