ಪ್ರಧಾನಿಯವರು ದೇಶದ ರೈತರನ್ನು ಮರೆಯುತ್ತಿದ್ದಾರೆ: ರಾಹುಲ್ ಗಾಂಧಿ ಆರೋಪ

ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ವರ್ತಿಸುತ್ತದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಟೀಕೆಗೆ ಶನಿವಾರ ತಿರುಗೇಟು ನೀಡಿದ...
ದೆಹಲಿಯಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ರಾಹುಲ್ ಗಾಂಧಿ
ದೆಹಲಿಯಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ರಾಹುಲ್ ಗಾಂಧಿ
Updated on: 

ನವದೆಹಲಿ: ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ವರ್ತಿಸುತ್ತದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಟೀಕೆಗೆ ಶನಿವಾರ ತಿರುಗೇಟು ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿಯವರು ಈ ದೇಶದ ರೈತರನ್ನು ಮರೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಧಾನಮಂತ್ರಿಯವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ. ಆದರೆ ಪ್ರಜಾಪ್ರಭುತ್ವವನ್ನು ಕಟ್ಟುವ ಈ ದೇಶದ ರೈತರ ಬಗ್ಗೆ ಕಾಳಜಿ ಹೊಂದಿಲ್ಲ ಎಂದು ಎಎನ್ ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಮಂತ್ರಿ ಮೋದಿ ಅವರು ನಿನ್ನೆ ಕಾಂಗ್ರೆಸ್ ಪಕ್ಷದ ಮೇಲೆ ವಾಗ್ದಾಳಿ ನಡೆಸಿ,ಸಂಸತ್ತಿನಲ್ಲಿ ಪರಿಮಾಮಕಾರಿ ಚರ್ಚೆ ನಡೆಯಲು ಕಾಂಗ್ರೆಸ್ ಪಕ್ಷ ಅಡ್ಡಿಯನ್ನುಂಟು ಮಾಡುತ್ತದೆ, ದೇಶದ ಅಭಿವೃದ್ಧಿಗೆ ಅಡ್ಡಗಾಲು ತರಲು ಪಿತೂರಿ ಮಾಡುತ್ತದೆ ಎಂದು ಆರೋಪಿಸಿದ್ದರು. 

ಅದಕ್ಕೆ ಇಂದು ಉತ್ತರಿಸಿರುವ ರಾಹುಲ್ ಗಾಂಧಿ, ಜನ ಸಭೆ ಲೋಕಸಭೆಗೂ ಮೀರಿದ್ದು, ಆದುದರಿಂದ ನಾನಿಲ್ಲಿ ನನ್ನ ಅಭಿಪ್ರಾಯವನ್ನು ಹೇಳುತ್ತಿದ್ದೇನೆ. ಲೋಕಸಭೆಯಲ್ಲಿ ಮನಬಂದಂತೆ ವರ್ತಿಸಿದ ಜನಪ್ರತಿನಿಧಿಗಳನ್ನು ದೇಶದ ಜನತೆ ಸುಮ್ಮನೆ ಬಿಡುವುದಿಲ್ಲ ಎಂದು ರಾಹುಲ್ ಗಾಂಧಿ ಸಾರ್ವಜನಿಕ ಸಭೆಯೊಂದರಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com