ಗೋಮಾಂಸ ನಿಷೇಧ: ಪ್ರತ್ಯೇಕವಾದಿಗಳಿಂದ ಕಾಶ್ಮೀರ ಬಂದ್

ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ರಾಜ್ಯದಲ್ಲಿ ಗೋ ಮಾಂಸ ಮಾರಾಟಕ್ಕೆ ನಿಷೇಧ ಹೇರಿದ್ದನ್ನು ವಿರೋಧಿಸಿ ಶನಿವಾರ ಕಣಿವೆ ರಾಜ್ಯ ಬಂದ್ ಮಾಡಲಾಗಿದೆ.
ಬಂದ್ ನಿಂದ ಬಿಕೋ ಎನ್ನುತ್ತಿರುವ ರಸ್ತೆಗಳು
ಬಂದ್ ನಿಂದ ಬಿಕೋ ಎನ್ನುತ್ತಿರುವ ರಸ್ತೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ರಾಜ್ಯದಲ್ಲಿ ಗೋಮಾಂಸ ಮಾರಾಟಕ್ಕೆ ನಿಷೇಧ ಹೇರಿದ್ದನ್ನು ವಿರೋಧಿಸಿ ಶನಿವಾರ ಕಣಿವೆ ರಾಜ್ಯ ಬಂದ್ ಮಾಡಲಾಗಿದೆ.

ಹುರಿಯತ್ ಕಾನ್ಫೆರೆನ್ಸ್‌ನ ಗೀಲಾನಿ ನೇತೃತ್ವದ ತಂಡ ಈ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ ಇತರೆ ಪ್ರತ್ಯೇಕವಾದಿಗಳು ಬೆಂಬಲ ಸೂಚಿಸಿದ್ದಾರೆ.

ಬಂದ್‌ನಿಂದಾಗಿ ಕಣಿವೆ ರಾಜ್ಯದಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಶಾಲಾ, ಕಾಲೇಜ್‌ಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಹಾಗೂ ಅರೆಸೇನಾಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com