ಹಿಮಾಚಲ ಪ್ರದೇಶದಲ್ಲಿ ಸುರಂಗ ಮಾರ್ಗ ಕುಸಿತ; ಮೂವರು ಸಿಲುಕಿರುವ ಶಂಕೆ

ಹಿಮಾಚಲ ಪ್ರದೇಶದ ಬಿಲಾಸ್ಪುರ ನಗರದ ಬಳಿ ನಿರ್ಮಾಣ ಹಂತದ ಸುರಂಗ ಮಾರ್ಗವೊಂದು ಕುಸಿದು ಬಿದ್ದಿದ್ದು, ಮೂವರು ಕಾರ್ಮಿಕರು ಸಿಲುಕಿರುವುದಾಗಿ ಶಂಕೆ ವ್ಯಕ್ತವಾಗಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ಶಿಮ್ಲಾ: ಹಿಮಾಚಲ ಪ್ರದೇಶದ ಬಿಲಾಸ್ಪುರ ನಗರದ ಬಳಿ ನಿರ್ಮಾಣ ಹಂತದ ಸುರಂಗ ಮಾರ್ಗವೊಂದು ಕುಸಿದು ಬಿದ್ದಿದ್ದು, ಮೂವರು ಕಾರ್ಮಿಕರು ಸಿಲುಕಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಚಂಡೀಗಢ- ಮನಾಲಿ ರಾಷ್ಟ್ರೀಯ ಹೆದ್ದಾರಿಯ ಬಳಿ ಸುರಂಗ ಮಾರ್ಗವೊಂದನ್ನು ಕೊರೆಯಲಾಗುತ್ತಿತ್ತು. ಈ ವೇಳೆ ಸ್ಥಳದಲ್ಲಿ ಭೂಕುಸಿತ ಉಂಟಾದ ಕಾರಣ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ಧಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಭದ್ರತಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com