ಮೀನುಗಾರರಿಗೆ ಮಾನವೀಯತೆ ತೋರಿಸಿ: ಪ್ರಧಾನಿ ಕೋರಿಕೆ

ಮೀನುಗಾರರ ಸಮಸ್ಯೆಯನ್ನು ಮಾನವೀಯ ನೆಲೆಯಲ್ಲಿ ಕಾಣುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರೀಲಂಕಾ ಪ್ರಧಾನಿ...
ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ

ನವದೆಹಲಿ: ಮೀನುಗಾರರ ಸಮಸ್ಯೆಯನ್ನು ಮಾನವೀಯ ನೆಲೆಯಲ್ಲಿ ಕಾಣುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಒತ್ತಾಯಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ಮೀನುಗಾರರ ಸಮಸ್ಯೆಗಳನ್ನು ನಾವಿಬ್ಬರೂ ಚರ್ಚಿಸಿದ್ದೇವೆ. ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಎರಡೂ ದೇಶಗಳ  ಮೀನುಗಾರರ ಒಕ್ಕೂಟಗಳು ತಮ್ಮ ಪ್ರಯತ್ನವನ್ನು ಮುಂದುವರಿಸಲಿ ಎಂದು ನಾವು ಒಪ್ಪಿಕೊಂಡಿದ್ದೇವೆ. ಮೀನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿರುವ ಅನೇಕ ಮೀನುಗಾರರ ಬದುಕಿನ ಮೇಲೆ ಪರಿಣಾಮ ಬೀರುವುದರಿಂದ ಸಮಸ್ಯೆಯನ್ನು ಮಾನವೀಯ ನೆಲೆಯಲ್ಲಿ ಕಾಣುವಂತೆ ಮಾತುಕತೆ ವೇಳೆ ಹೇಳಿರುವುದಾಗಿ ದೆಹಲಿಯಲ್ಲಿಂದು ಪ್ರಧಾನಿ ಮೋದಿ ಜಂಟಿ ಹೇಳಿಕೆ ವೇಳೆ ತಿಳಿಸಿದ್ದಾರೆ.

ಭಾರತೀಯ ಮೀನುಗಾರರು ಸಮುದ್ರದ ಆಳದಲ್ಲಿ ಮೀನುಗಾರಿಕೆ ನಡೆಸುವಂತೆ ಪ್ರೋತ್ಸಾಹಿಸಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಶ್ರೀಲಂಕಾ ಪ್ರಧಾನಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಮೂರು ದಿನಗಳ ಭೇಟಿಗಾಗಿ ನಿನ್ನೆ ಸಂಜೆ ದೆಹಲಿಗೆ ಆಗಮಿಸಿದ್ದರು. ಅವರು ಕಳೆದ ತಿಂಗಳಷ್ಟೇ ಶ್ರೀಲಂಕಾ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com