ಅಂಚೆಚೀಟಿಯಲ್ಲಿ ಇಂದಿರಾ, ರಾಜೀವ್ ಚಿತ್ರ ಕೈ ಬಿಟ್ಟಿರುವುದಕ್ಕೆ ಕಾಂಗ್ರೆಸ್ ಆಕ್ಷೇಪ

ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನೇತಾರರಾಗಿದ್ದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಚಿತ್ರವಿರುವ ಅಂಚೆಚೀಟಿಯನ್ನು ಕೈ ಬಿಟ್ಟಿರುವ...
ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಚಿತ್ರವಿರುವ ಅಂಚೆಚೀಟಿ
ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಚಿತ್ರವಿರುವ ಅಂಚೆಚೀಟಿ

ನವದೆಹಲಿ : ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನೇತಾರರಾಗಿದ್ದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಚಿತ್ರವಿರುವ ಅಂಚೆಚೀಟಿಯನ್ನು ಕೈ ಬಿಟ್ಟಿರುವ ನರೇಂದ್ರ ಮೋದಿ ಸರ್ಕಾರದ ತೀರ್ಮಾನಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಬಿಜೆಪಿ ಸರ್ಕಾರ ಇಂದಿರಾ, ರಾಜೀವ್ ಚಿತ್ರವಿರುವ ಅಂಚೆ ಚೀಟಿಗಳನ್ನು ಕೈ ಬಿಡುವ ಮೂಲಕ ಮುಯ್ಯಿ ತೀರಿಸುತ್ತಿದೆ ಎಂದು ಕಾಂಗ್ರೆಸ್ ದೂರಿದೆ.

ರಾಜಕೀಯ ಅಥವಾ ಯೋಜನೆಗಳಿಗೆ ವಿರೋಧ ವ್ಯಕ್ತ ಪಡಿಸಬಹುದು. ಆದರೆ ಆ ವಿರೋಧಗಳನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು. ಇಂಥಾ ವೈಯಕ್ತಿಕ ದ್ವೇಷಗಳು ಪ್ರಜಾಪ್ರಭುತ್ವದಲ್ಲಿ ಒಳ್ಳೆಯದಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆಯ ವಿಪಕ್ಷ ನೇತಾರ ರಾಧಾಕೃಷ್ಣ ವಿಖೆ ಪಾಟಿಲ್ ಹೇಳಿಕೆ ನೀಡಿದ್ದಾರೆ.

ಒಂದು ಕಡೆ ಕೇಂದ್ರ ಸರ್ಕಾರ ಇಂದಿರಾ ಮತ್ತು ರಾಜೀವ್ ಗಾಂಧಿಯ ಚಿತ್ರವಿರುವ ಅಂಚೆ ಚೀಟಿಯನ್ನು ಸ್ಥಗಿತಗೊಳಿಸುತ್ತಿದೆ. ಇನ್ನೊಂದೆಡೆ  ಶ್ಯಾಮಪ್ರಸಾದ್ ಮುಖರ್ಜಿ ಮತ್ತು ದೀನ್ ದಯಾಳ್ ಉಪಾಧ್ಯಾಯರ ಚಿತ್ರವಿರುವ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಲು ಸಿದ್ಧತೆ ನಡೆಸುತ್ತಿದೆ. ಇದು ಮುಯ್ಯಿ ಅಲ್ಲದೆ ಬೇರೇನೂ ಅಲ್ಲ ಎಂದು ವಿಖೆ ಪಾಟಿಲ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com