ಪ್ರಧಾನಿ ಮೋದಿ ಜನ್ಮದಿನ: ರಾಷ್ಟ್ರಪತಿ ಪ್ರಣಬ್ ಶುಭಾಶಯ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ 65ನೇ ವಸಂತಕ್ಕೆ ಕಾಲಿಟ್ಟಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ದೇಶದ ವಿವಿಧ ಪಕ್ಷಗಳ ನಾಯಕರು ಅವರಿಗೆ ಶುಭಾಶಯ ಕೋರಿದ್ದಾರೆ.
ಇಂಡೋ-ಪಾಕ್ ಯುದ್ಧದ ಸುವರ್ಣ ಮಹೋತ್ಸವದ ಪ್ರಯುಕ್ತ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಲಾಗಿರುವ ವಿಶೇಷ ಪ್ರದರ್ಶನ ಸೂರ್ಯಾಂಜಲಿಯಲ್ಲಿ ಕಾಣಿಸಿಕೊಂಡ ಪ್ರಧಾನಿ  ನರೇಂದ್ರ ಮೋದಿ
ಇಂಡೋ-ಪಾಕ್ ಯುದ್ಧದ ಸುವರ್ಣ ಮಹೋತ್ಸವದ ಪ್ರಯುಕ್ತ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಲಾಗಿರುವ ವಿಶೇಷ ಪ್ರದರ್ಶನ ಸೂರ್ಯಾಂಜಲಿಯಲ್ಲಿ ಕಾಣಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ 65ನೇ ವಸಂತಕ್ಕೆ ಕಾಲಿಟ್ಟಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ದೇಶದ ವಿವಿಧ ಪಕ್ಷಗಳ ನಾಯಕರು ಅವರಿಗೆ ಶುಭಾಶಯ ಕೋರಿದ್ದಾರೆ.

65ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ನಾನಾ ಭಾಗಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು  ಮೋದಿ ಅವರಿಗೆ ಶುಭಾಶಯ ಕೋರುತ್ತಾ ಅವರ ಚೈತನ್ಯ ಮತ್ತು ಚಿಂತನಾ ಲಹರಿಯನ್ನು ಕೊಂಡಾಡಿದ್ದಾರೆ. ಇನ್ನು ಸದಾಕಾಲ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್  ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ಶುಭಾಶಯ ಕೋರಿದ್ದು, ಟ್ವಿಟ್ಟರ್ ನಲ್ಲಿ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದು, ಧೀರ್ಘಾಯುಷಿಗಳಾಗಿ ಬಾಳಿ ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು  ಟ್ವೀಟ್ ಮಾಡಿದ್ದಾರೆ.  ಕೇಂದ್ರ ಸಚಿವರಾದ ಬೀರೇಂದ್ರ ಸಿಂಗ್ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದು, ದೇಶದ ಅತ್ಯಂತ ಜನಪ್ರಿಯ ಮತ್ತು ಯಶಸ್ವೀ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮ ದಿನದ ಶುಭಾಶಯ ಕೋರುತ್ತೇನೆ. ಧೀರ್ಘಾಯುಷಿಗಳಾಗಿ ಬಾಳಿ, ನಿಮ್ಮ ಕನಸಿನ ಭಾರತವನ್ನು ನಿರ್ಮಾಣ ಮಾಡಿ ಎಂದು ಹಾರೈಸಿದ್ದಾರೆ.

ನರೇಂದ್ರ ಮೋದಿ ಅವರನ್ನು ಹೊಗಳಿ ಕಾಂಗ್ರೆಸ್ ಹೈಕಮಾಂಡ್ ನ ಕೆಂಗಣ್ಣಿಗೆ ಗುರಿಯಾಗಿದ್ದ ಸಂಸದ ಶಶಿ ತರೂರ್ ಅವರು ಕೂಡ ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಶುಭಾಶಯ ಕೋರಿದ್ದು, ನಿಮ್ಮ ಶಕ್ತಿ, ಬದ್ಧತೆಯಿಂದ ಭಾರತಕ್ಕೆ ಸೇವೆ ಸಲ್ಲಿಸುವಂತಾಗಲಿ. ನಾವು ನಿಮ್ಮನ್ನು ಗೌರವಿಸುತ್ತೇವೆ ಆದರೆ ರಾಜಕೀಯವಾಗಿ ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com