
ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ಬಂದರೆಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಸ್ತಿ ಮತ್ತು ಹಣವನ್ನು ದುರುಪಯೋಗ ಪಡಿಸಿಕೊಂಡ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಕ್ಲೋಸ್ ಮಾಡಿದ್ದ ಕೇಸ್ ಅನ್ನು ಮತ್ತೆ ರಿ ಓಪನ್ ಮಾಡುತ್ತಿದೆ.
ಕೇಸ್ ರಿ- ಓಪನ್ ಆಗುತ್ತಿರುವುದರಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ಸಂಕಷ್ಟ ಎದುರಾಗಿದೆ.
ಕಳೆದ ಆಗಸ್ಟ್ ನಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ವಿರುದ್ಧ ಯಾವುದೇ ಕೇಸ್ ದಾಖಲಾಗಿಲ್ಲವೆಂದು ಹೇಳಿ ಜಾರಿ ನಿರ್ದೇಶಾನಲಯ ಪ್ರಕರಣಕ್ಕೆ ಅಂತ್ಯ ಹಾಡಿತ್ತು. ಇಷ್ಟು ದಿನ ಜಾರಿ ನಿರ್ದೇಶಾನಲಯದ ಮುಖ್ಯಸ್ಥರಾಗಿದ್ದ ರಾಜನ್ ಎಸ್.ಕಟೋಚ್ ಅವರನ್ನು ಮಂಗಳವಾರ ಬಿಜೆಪಿ ಸರ್ಕಾರ ಕೆಲಸದಿಂದ ವಜಾಗೊಳಿಸಿ ಬೃಹತ್ ಕೈಗಾರಿಕೆ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಅವರ ಜಾಗಕ್ಕೆ ಹಿರಿಯ ಐಎಎಸ್ ಅಧಿಕಾರಿ ಕರ್ನಾಲ್ ಸಿಂಗ್ ಅವರನ್ನು ನೇಮಿಸಿದೆ.
ಕೇಸ್ ಕ್ಲೋಸ್ ಮಾಡಿರುವುದರ ಸಂಬಂಧ ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಹಣ ದುರುಪಯೋಗ ಪಡಿಸಿಕೊಂಡ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು.
Advertisement