ಬಿಹಾರ ಚುನಾವಣೆ: ಎಲ್‌ಜೆಪಿಯ 12 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಬಿಹಾರ ವಿಧಾನಸಭೆ ಚುನಾವಣೆಗೆ ಎನ್‌ಡಿಎ ಮಿತ್ರ ಎಲ್‌ಜೆಪಿ 12 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.
ಚಿರಾಗ್ ಪಾಸ್ವಾನ್
ಚಿರಾಗ್ ಪಾಸ್ವಾನ್
Updated on

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ಎನ್‌ಡಿಎ ಮಿತ್ರ ಎಲ್‌ಜೆಪಿ 12 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಸಹೋದರ ಹಾಗೂ ಪಕ್ಷದ ಬಿಹಾರ ಮುಖ್ಯಸ್ಥ ಪಶುಪತಿ ಕುಮಾರ್ ಪರಾಸ್ ಹಾಗೂ ಪಾಸ್ವಾನ್ ಅವರ ಸಹೋದರ, ಸಂಸದ ರಾಮ್ ಚಂದ್ರ ಪಾಸ್ವಾನ್ ಅವರ ಪುತ್ರ ಪ್ರಿನ್ಸ್ ರಾಜ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಪಕ್ಷದ ಮೊದಲ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಎಲ್‌ಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು, 40 ಸ್ಥಾನಗಳ ಪೈಕಿ 29 ಸ್ಥಾನಗಳ ಬಗ್ಗೆ ಬಿಜೆಪಿ ಮಿತ್ರ ಪಕ್ಷಗಳ ಸಹಮತ ಇದ್ದು, ಇನ್ನುಳಿದ 11 ಸ್ಥಾನಗಳ ಬಗ್ಗೆ ಚರ್ಚಿ ನಡೆಯುತ್ತಿದೆ ಎಂದರು.

ಐದು ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಕ್ಟೋಬರ್ 12ರಂದು ಮೊದಲ ಹಂತ ಹಾಗೂ ನವೆಂಬರ್ 5ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಸೆಪ್ಟೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com