

ಸುರತ್: ಗುಜರಾತ್‌ನಲ್ಲಿ ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪತಿದಾರ್ ಅನಾಮತ್ ಆಂದೋಲನ್ ಸಮಿತಿಯ ಸಂಚಾಲಕ ಹಾರ್ದಿಕ್ ಪಟೇಲ್ ಅವರನ್ನು ಶನಿವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.
ಪಟೇಲ್ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ-ಕಾಲೇಜು ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟದ ಭಾಗವಾಗಿ ಹಾರ್ದಿಕ್ ಪಟೇಲ್ ಇಂದು ಏಕ್ತಾ ಯಾತ್ರೆ ಕೈಗೊಂಡಿದ್ದರು. ಆದರೆ ಯಾತ್ರೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ.
ನಿಷೇಧದ ನಡುವೆಯೂ ಏಕ್ತಾ ಯಾತ್ರೆ ನಡೆಸಲು ಮುಂದಾದ ಹಾರ್ದಿಕ್ ಪಟೇಲ್ ಹಾಗೂ ಅವರ 78ಕ್ಕೂ ಹೆಚ್ಚು ಬೆಂಬಲಿಗರನ್ನು ಸೂರತ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾರ್ದಿಕ್ ಮತ್ತು ಅವರ ಬೆಂಬಲಿಗರನ್ನು ಸೂರತ್‌ನ ವರಚ್ಚಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಗುಜರಾತ್ ಸರ್ಕಾರ ಮತ್ತು ಪೊಲೀಸರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಹಾರ್ದಿಕ್ ಟ್ವಿಟ್ ಮಾಡಿದ್ದಾರೆ.