ಹಾರ್ದಿಕ್ ಬಂಧನದ ಬಳಿಕ ಗುಜರಾತ್‌ನಲ್ಲಿ ಮೊಬೈಲ್ ಇಂಟರ್‌ನೆಟ್ ನಿಷೇಧ

ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪತಿದಾರ್ ಅನಾಮತ್ ಆಂದೋಲನ್ ಸಮಿತಿಯ ಸಂಚಾಲಕ ಹಾರ್ದಿಕ್ ಪಟೇಲ್ ಬಂಧನದ...
ಹಾರ್ದಿಕ್ ಪಟೇಲ್
ಹಾರ್ದಿಕ್ ಪಟೇಲ್

ಅಹಮದಾಬಾದ್: ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪತಿದಾರ್ ಅನಾಮತ್ ಆಂದೋಲನ್ ಸಮಿತಿಯ ಸಂಚಾಲಕ ಹಾರ್ದಿಕ್ ಪಟೇಲ್ ಬಂಧನದ ಬಳಿಕ ವದಂತಿಗಳನ್ನು ತಡೆಯಲು ಗುಜರಾತ್ ಸರ್ಕಾರ ರಾಜ್ಯಾದ್ಯಂತ ಮೊಬೈಲ್ ಇಂಟರ್‌ನೆಟ್ ಸೇವೆಗೆ ನಿಷೇಧ ಹೇರಿದೆ.

'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ವದಂತಿ ಹರಡುವುದನ್ನು ತಡೆಯುವ ಉದ್ದೇಶದಿಂದ ರಾಜ್ಯಾದ್ಯಂತ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ' ಪೊಲೀಸ್ ಮಹಾ ನಿರ್ದೇಶಕ ಪಿ.ಸಿ.ಥಾಕೂರ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಇಂದು ಮಧ್ಯಾಹ್ನದಿಂದ ಸೆಪ್ಟೆಂಬರ್ 20ರಂದು ಮಧ್ಯಾಹ್ನ 12ಗಂಟೆಯವರೆಗೆ ಮೊಬೈಲ್ ಇಂಟರ್‌ನೆಟ್ ಸೇವೆ ನಿಷೇಧಿಸಿ ಅಹಮದಾಬಾದ್ ಪೊಲೀಸ್ ಆಯುಕ್ತ ಶಿವಾನಂದ್ ಜಾ ಅವರು ಆದೇಶ ಹೊರಡಿಸಿದ್ದಾರೆ.

ಯುವ ನಾಯಕ ಹಾರ್ದಿಕ್ ಪಟೇಲ್ ಬಂಧನದ ಬೆನ್ನಲ್ಲೇ ಸುರತ್ ಜಿಲ್ಲಾಧಿಕಾರಿ 24 ಗಂಟೆಗಳ ಕಾಲ ಮೊಬೈಲ್ ಇಂಟರ್‌ನೆಟ್ ಸೇವೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಪಟೇಲ್‌ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ-ಕಾಲೇಜು ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟದ ಭಾಗವಾಗಿ ಹಾರ್ದಿಕ್ ಪಟೇಲ್ ಇಂದು ಏಕ್ತಾ ಯಾತ್ರೆ ಕೈಗೊಂಡಿದ್ದರು. ಆದರೆ ಯಾತ್ರೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ನಿಷೇಧದ ನಡುವೆಯೂ ಏಕ್ತಾ ಯಾತ್ರೆ ನಡೆಸಲು ಮುಂದಾದ ಹಾರ್ದಿಕ್‌ ಪಟೇಲ್‌ ಹಾಗೂ ಅವರ 78ಕ್ಕೂ ಹೆಚ್ಚು ಬೆಂಬಲಿಗರನ್ನು ಸೂರತ್‌  ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com