ದೆಹಲಿಯ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಅಸೀಂ ಅಹ್ಮದ್ ಖಾನ್ ನೇತೃತ್ವದಲ್ಲಿ ಸೇರಿದ ಸಭೆಯಲ್ಲಿ ಸಚಿವ ಸಂಪುಟ ಈ ತೀರ್ಮಾನ ತೆಗೆದುಕೊಂಡಿದೆ. ಪೂಜಾ ವಿಧಿ ವಿಧಾನಗಳನ್ನು ಮುಗಿಸಿ ಅದನ್ನೆಲ್ಲಾ ನದಿಗೆ ಎಸೆಯುವ ಯಾವುದೇ ವ್ಯಕ್ತಿಗಳನ್ನು ಕಂಡರೆ ಆ ವಿಚಾರವನ್ನು ಪೊಲೀಸರಿಗೆ,ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಅಧಿಕಾರಿಗಳಿಗೆ ಮತ್ತು ಮುನ್ಸಿಪಾಲಿಟಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇವರಿಗೆ ದಂಡ ವಸೂಲಿ ಮಾಡುವ ಅಧಿಕಾರವಿದೆ. ಅದೇ ವೇಳೆ ತ್ಯಾಜ್ಯಗಳನ್ನು ಎಸೆಯುವುದನ್ನು ನಿಯಂತ್ರಿಸಲು ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ.