ಆಂಧ್ರದ ನೂತನ ರಾಜಧಾನಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಸಿಂಗಪೂರ್ ಪ್ರಧಾನಿಗೆ ಆಹ್ವಾನ

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಿಂಗಪೂರ್ ಪ್ರಧಾನಿ ಲೀ ಸೀನ್ ಲೂಂಗ್ ಅವರನ್ನು ಆಂಧ್ರಪ್ರದೇಶದ ನೂತನ ರಾಜಧಾನಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಿಂಗಪೂರ್ ಪ್ರಧಾನಿ ಲೀ ಸೀನ್ ಲೂಂಗ್ ಅವರನ್ನು ಆಂಧ್ರಪ್ರದೇಶದ ನೂತನ ರಾಜಧಾನಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಮುಂದಿನ ತಿಂಗಳು ಆಂಧ್ರಪ್ರದೇಶದ ನೂತನ ರಾಜಧಾನಿಗೆ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಲಿದೆ. ಸಿಂಗಪೂರ್ ಗೆ ಭೇಟಿ ನೀಡಿರುವ ಚಂದ್ರಬಾಬು ನಾಯ್ಡು ಅಲ್ಲಿನ ಪ್ರಧಾನಿಯನ್ನು ಭೇಟಿ ಮಾಡಿದ್ದು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದಾರೆ. ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್.22 ರಂದು ಶಂಕುಸ್ಥಾಪನೆ ಮಾಡಲಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಎಸ್ ಈಸ್ವರನ್ ಅವರನ್ನು ಭೇಟಿ ಮಾಡಿರುವ ಚಂದ್ರಬಾಬು ನಾಯ್ಡು, ನೂತನ ರಾಜಧಾನಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ರಾಜಧಾನಿ ಅಭಿವೃದ್ಧಿಗೆ ಸಿಂಗಪೂರ್ ಸರ್ಕಾರ ಈಗಾಗಲೇ ಮೂರು ಮಾಸ್ಟರ್ ಪ್ಲಾನ್ ಗಳನ್ನು ರೂಪಿಸಿದೆ. ಹೊಸ ರಾಜಧಾನಿ ಅಭಿವೃದ್ಧಿಗೆ ಚಂದ್ರಬಾಬು ನಾಯ್ಡು ಸಿಂಗಪೂರ್ ಸರ್ಕಾರದ ನೆರವು ಕೋರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com